ಉಡುಪಿ: ಲಕುಮಿ ಸಿನಿ ಕ್ರಿಯೇಷನ್ ಮತ್ತು ಲೋ ಬಜೆಟ್ ಪ್ರೊಡಕ್ಷನ್ ನಿರ್ಮಾಣದಲ್ಲಿ ಹರ್ಷಿತ್ ಸೊಮೇಶ್ವರ ನಿರ್ದೇಶನದಲ್ಲಿ ನಿರ್ಮಾಣಗೊಂಡ “ಅನರ್ ಕಲಿ” ತುಳು ಸಿನಿಮಾ ಆ. 23ರಂದು ತೆರೆಕಂಡಿದ್ದು, ಪ್ರೇಕ್ಷಕರಿಂದ ಉತ್ತಮ ಸ್ಪಂದನೆ ಸಿಕ್ಕಿದೆ. ಆ. 30ರಿಂದ ಉಡುಪಿಯ ಕಲ್ಪನಾ ಮತ್ತು ಕಾಸರಗೋಡಿನಲ್ಲಿ ತೆರೆ ಕಾಣಲಿದೆ. ಬಳಿಕ ಮುಂಬೈ, ಪೂನಾ, ಬೆಂಗಳೂರು ಹಾಗೂ ವಿದೇಶದಲ್ಲಿ ತೆರೆಕಾಣಲಿದೆ.
ಈ ಕುರಿತು ಉಡುಪಿಯಲ್ಲಿ ಇಂದು ನಡೆದ ಸುದ್ದಿಗೋಷ್ಠಿಯಲ್ಲಿ ಮಾಹಿತಿ ನೀಡಿದ ನಿರ್ದೇಶಕ ಹರ್ಷಿತ್ ಸೋಮೇಶ್ವರ್ ಅವರು, ‘ಅನರ್ ಕಲಿ” ಸಿನಿಮಾ ಒಂದೇ ಹಂತದಲ್ಲಿ 18 ದಿನಗಳ ಕಾಲ ಚಿತ್ರೀಕರಣ ನಡೆದಿತ್ತು. ಪೊಳಲಿ, ಕಟೀಲು, ಸೋಮೇಶ್ವರ, ಉಳ್ಳಾಲ, ಉಳಿಯ, ನೀರ್ ಮಾರ್ಗ, ಹಾಗೂ ಕಳಸದಲ್ಲಿ ಸಿನಿಮಾಕ್ಕೆ ಚಿತ್ರೀಕರಣ ನಡೆದಿದೆ. ನವೀನ್ ಡಿ ಪಡೀಲ್, ಅರವಿಂದ ಬೋಳಾರ್, ದೀಪಕ್ ಪಾಣಾಜೆ, ರವಿ ರಾಮಕುಂಜ, ಪುಷ್ಪರಾಜ್ ಬೊಳ್ಳೂರು, ಸುಜಾತ ಶಕ್ತಿನಗರ, ನಮಿತಾ ಕುಳೂರು ಮುಖ್ಯ ಭೂಮಿಕೆಯಲ್ಲಿದ್ದಾರೆ. ನಾಯಕ ನಟನಾಗಿ ವಿಜಯ್ ಶೋಭರಾಜ್ ಪಾವೂರು, ನಾಯಕಿಯಾಗಿ ಮಧುರ ಆರ್ ಜೆ ಅಭಿನಯಿಸಿದ್ದಾರೆ. ಇನ್ನುಳಿದಂತೆ ಮೋಹನ್ ಕೊಪ್ಪಲ, ಮಂಜು ರೈ ಮುಳೂರು, ರಂಜನ್ ಬೋಳೂರು ಶರಣ್ ಕೈಕಂಬ, ಪ್ರಕಾಶ್ ಶೆಟ್ಟಿ ಧರ್ಮನಗರ, ಮಧುರ ಆರ್.ಜೆ ವಾತ್ಸಲ್ಯ ಸಾಲಿಯಾನ್ , ವಿನಾಯಕ್ ಜೆಪ್ಪು ತಾರಾಗಣದಲ್ಲಿದ್ದಾರೆ. ಛಾಯಾಗ್ರಹಣ ಅನಿಲ್ ಕುಮಾರ್, ಅರುಣ್ ರೈ ಪುತ್ತೂರು, ಸಹಾಯಕ ಛಾಯಾಗ್ರಹಣ ಚರಣ್ ಆಚಾರ್ಯ, ಪ್ರಜ್ವಲ್ ಸುವರ್ಣ ಹಾಗೂ ರೋಹಿತ್ ಪೂಜಾರಿ ಸಂಗೀತ ನೀಡಿದ್ದಾರೆ ಎಂದರು.
ಸುದ್ದಿಗೋಷ್ಠಿಯಲ್ಲಿ ಸಂಗೀತ ನಿರ್ದೇಶಕ ರೋಹಿತ್ ಪೂಜಾರಿ, ವಾತ್ಸಲ್ಯ ಸಾಲಿಯಾನ್, ಭರತ್ ತುಳುವ ಉಪಸ್ಥಿತರಿದ್ದರು.