ಅಪರಿಚಿತ ವ್ಯಕ್ತಿಯ ಮೃತದೇಹ ಪತ್ತೆ

ಉಡುಪಿ: ಉಡುಪಿಯ ಮೂಡನಿಡಂಬೂರು ಗ್ರಾಮದ ಸರಸ್ವತಿ ಶಾಲೆಯ ಬಳಿ ನವೆಂಬರ್ 23 ರಂದು ಸುಮಾರು 50-55 ವರ್ಷ ಪ್ರಾಯದ ಅಪರಿಚಿತ ಗಂಡಸಿನ ಮೃತದೇಹ ಪತ್ತೆಯಾಗಿದ್ದು, ಮೃತದೇಹವನ್ನು ನಗರದ ಅಜ್ಜರಕಾಡು ಜಿಲ್ಲಾ ಆಸ್ಪತ್ರೆಯ ಶವಾಗಾರದಲ್ಲಿ ಸಂರಕ್ಷಿಸಿ ಇಡಲಾಗಿರುತ್ತದೆ.

5 ಅಡಿ 8 ಇಂಚು ಎತ್ತರ, ಸಾಧರಾಣ ಶರೀರ, ದುಂಡು ಮುಖ, ಎಣ್ಣೆಕಪ್ಪು ಮೈಬಣ್ಣ ಹೊಂದಿರುವ ಮೃತ ಅಪರಿಚಿತ ವ್ಯಕ್ತಿಯ ವಾರಸುದಾರರು ಯಾರಾದರೂ ಇದ್ದಲ್ಲಿ ಪಿ.ಎಸ್.ಐ ಉಡುಪಿ ನಗರ ಪೊಲೀಸ್ ಠಾಣೆ ಮೊ.ನಂ: 9480805445, ಪಿ.ಐ ಉಡುಪಿ ನಗರ ಪೊಲೀಸ್ ಠಾಣೆ ಮೊ.ನಂ: 9480805408, ಜಿಲ್ಲಾ ನಿಸ್ತಂತು ಕಚೇರಿ ದೂ.ಸಂಖ್ಯೆ: 0820-2526444 ಹಾಗೂ ಉಡುಪಿ ನಗರ ಪೊಲೀಸ್ ಠಾಣೆ ದೂ.ಸಂಖ್ಯೆ: 0820-2520444 ಗೆ ಮಾಹಿತಿ ನೀಡುವಂತೆ ಉಡುಪಿ ನಗರ ಪೊಲೀಸ್ ಠಾಣಾಧಿಕಾರಿಗಳ ಕಚೇರಿ ಪ್ರಕಟಣೆ ತಿಳಿಸಿದೆ.