ಅಯೋಧ್ಯೆಯಲ್ಲಿ ಪೇಜಾವರ ಸ್ವಾಮೀಜಿ ನೇತೃತ್ವದಲ್ಲಿ ರಾಮ ತಾರಕ ಯಜ್ಞ ಸಂಪನ್ನ

ಉಡುಪಿ: ಅಯೋಧ್ಯೆಯಲ್ಲಿ ಪೇಜಾವರ ಮಠದ ಶ್ರೀ ವಿಶ್ವಪ್ರಸನ್ನ ತೀರ್ಥ ಸ್ವಾಮೀಜಿ ನೇತೃತ್ವದಲ್ಲಿ ರಾಮ ತಾರಕ ಯಜ್ಞ ನಡೆಯುತ್ತಿದೆ. ಚೆನ್ನೈನಲ್ಲಿ ಜಾತುರ್ಮಾಸ್ಯ ವೃತ ಮುಗಿಸಿದ ಬಳಿಕ ಅಯೋಧ್ಯೆಯಲ್ಲಿ ತಂಗಿರುವ ಪೇಜಾವರ ಶ್ರೀಗಳು ಒಂದು ವಾರಗಳ ಕಾಲ ಈ ಯಾಗದಲ್ಲಿ ಭಾಗಿಯಾಗಲಿದ್ದಾರೆ. ಈ ನಡುವೆ ಉಡುಪಿಯ ಶ್ರೀ ಕೃಷ್ಣಾಪುರ ಮಠಾಧೀಶರಾದ ಶ್ರೀ ವಿದ್ಯಾಸಾಗರತೀರ್ಥ ಶ್ರೀಪಾದರು ಮಂಗಳವಾರ ರಾತ್ರಿ ಅಯೋಧ್ಯೆ ತಲುಪಿದ್ದಾರೆ. ಬುಧವಾರ ಬೆಳಿಗ್ಗೆ ಅಲ್ಲಿನ ಪೇಜಾವರ ಮಠದಲ್ಲಿ ಪ್ರಾತಃ ಪೂಜಾವಿಧಿಗಳನ್ನು ಮುಗಿಸಿದ ಬಳಿಕ ಪೇಜಾವರ ಶ್ರೀಗಳೊಂದಿಗೆ ರಾಮಮಂದಿರಕ್ಕೆ ತೆರಳಿ ಶ್ರೀರಾಮದೇವರ ದರ್ಶನ ಪಡೆದರು. ಯಾಗ ಶಾಲೆಯಲ್ಲಿ ನಡೆಯುತ್ತಿರುವ ಶ್ರೀ ರಾಮ ತಾರಕ ಯಜ್ಞದ ಪೂರ್ಣಾಹುತಿಯಲ್ಲಿ ಭಾಗವಹಿಸಿದರು.ಅಯೋಧ್ಯೆಯಲ್ಲಿ ಶ್ರೀರಾಮನ ಪ್ರತಿಷ್ಠಾಪನೆಯ ಬಳಿಕ ಶ್ರೀಗಳ ಮೊದಲ ಭೇಟಿ ಇದಾಗಿದೆ.

Oplus_0