ಅಯೋಧ್ಯೆ ಶ್ರೀರಾಮಮಂದಿರ ಲೋಕಾರ್ಪಣೆ ದಿನ ಸಿದ್ದವಾಗಲಿದೆ 7000kg “ರಾಮ ಹಲ್ವಾ”

ಅಯೋಧ್ಯೆ: ಜನವರಿ 22ರಂದು ನಡೆಯಲಿರುವ ಅಯೋಧ್ಯೆ ಶ್ರೀರಾಮಮಂದಿರ ಉದ್ಘಾಟನೆಗೆ ಸಕಲ ಸಿದ್ಧತೆ ನಡೆಯುತ್ತಿದ್ದು, ಇಡೀ ದೇಶವೇ ಈ ಹಬ್ಬವನ್ನು ಸಂಭ್ರಮಪಡುವ ದಿನವಾಗಿದೆ. ಈ ಹಬ್ಬದ ಮೆರುಗನ್ನು ಹೆಚ್ಚಿಸಲು ಅಯೋಧ್ಯೆಯಲ್ಲಿ ಅಂತಾರಾಷ್ಟ್ರೀಯ ಖ್ಯಾತಿಯ ಬಾಣಸಿಗರೊಬ್ಬರು ವಿಶೇಷ ‘ರಾಮ ಹಲ್ವಾ’ ತಯಾರಿಸಲಿದ್ದಾರೆ.

ಅಂತಾರಾಷ್ಟ್ರೀಯ ಖ್ಯಾತಿಯ ಬಾಣಸಿಗ, ನಾಗ್ಪುರ ಮೂಲದ ವಿಷ್ಣು ಮನೋಹರ್‌ ಅವರು ರಾಮಮಂದಿರ ಲೋಕಾರ್ಪಣೆ ದಿನ ವಿಶೇಷ ‘ರಾಮ ಹಲ್ವಾ’ತಯಾರಿಸಲಿದ್ದಾರೆ.

ಸುಮಾರು 7 ಸಾವಿರ ಕೆ.ಜಿ. ರಾಮ ಹಲ್ವಾಗೆ 12 ಸಾವಿರ ಲೀಟರ್‌ ನೀರಿನ ಸಾಮರ್ಥ್ಯದ ಬೃಹತ್‌ ಕಡಾಯಿಯೊಂದನ್ನು ಕೂಡ ತಯಾರಿಸಿದ್ದಾರೆ.

ಇದಕ್ಕೆ “900 ಕೆಜಿ ರವೆ, 1 ಸಾವಿರ ಕೆಜಿ ತುಪ್ಪ, ಸಾವಿರ ಕೆಜಿ ಸಕ್ಕರೆ, 2 ಸಾವಿರ ಲೀಟರ್‌ ಹಾಲು, 2,500 ಲೀಟರ್‌ ನೀರು, 300 ಕೆಜಿ ಡ್ರೈ ಫ್ರೂಟ್ಸ್‌, 75 ಕೆಜಿ ಏಲಕ್ಕಿ ಪೌಡರ್‌ ಬಳಸಿಕೊಂಡು ವಿಶೇಷ ರಾಮ ಹಲ್ವಾ ತಯಾರಿಸಲಾಗುವುದು” ಎಂದು ವಿಷ್ಣು ಮನೋಹರ್‌ ತಿಳಿಸಿದ್ದಾರೆ.