ಅರ್ಜಿ ಸಲ್ಲಿಕೆ: ಅವಧಿ ವಿಸ್ತರಣೆ

ಉಡುಪಿ: ಅಲ್ಪಸಂಖ್ಯಾತರ ಕಲ್ಯಾಣ ಇಲಾಖೆಯ ವತಿಯಿಂದ ಪ್ರಸಕ್ತ ಸಾಲಿನಲ್ಲಿ ಶೈಕ್ಷಣಿಕ ವರ್ಷಕ್ಕೆ ಮೆಟ್ರಿಕ್ ಪೂರ್ವ ಮತ್ತು ಮೆಟ್ರಿಕ್ ನಂತರದ ವಿದ್ಯಾರ್ಥಿವೇತನ, ವಿದೇಶಿ ವಿಶ್ವವಿದ್ಯಾನಿಲಯಗಳಲ್ಲಿ ಸ್ನಾತಕೋತ್ತರ ಕೋರ್ಸುಗಳಲ್ಲಿ ವ್ಯಾಸಾಂಗ ಮಾಡುತ್ತಿರುವ ವಿದ್ಯಾರ್ಥಿಗಳಿಗೆ ವಿದೇಶಿ ವಿದ್ಯಾರ್ಥಿವೇತನ, ಬಿ.ಎಸ್ಸಿ/ ಜಿ.ಎನ್.ಎಂ ನರ್ಸಿಂಗ್, ಐ.ಐ.ಟಿ, ಐ.ಐ.ಐ.ಟಿ, ಎನ್.ಐ.ಟಿ, ಐ.ಐ.ಎಂ, ಐ.ಐ.ಎಸ್.ಇ.ಆರ್, ಎ.ಐ.ಐ.ಎಂ.ಎಸ್, ಎನ್.ಎಲ್.ಯು, ಐ.ಎನ್.ಐ ಮತ್ತು ಐ.ಯು.ಎಸ್.ಎಲ್.ಎ ಇತ್ಯಾದಿ ಪ್ರತಿಷ್ಠಿತ ಸಂಸ್ಥೆಗಳಲ್ಲಿ ಪ್ರವೇಶ ಪಡೆದಿರುವ ವಿದ್ಯಾರ್ಥಿಗಳಿಗೆ ಪ್ರೋತ್ಸಾಹಧನ, ಅಂಗಿಕೃತವಾದ ವಿಶ್ವವಿದ್ಯಾನಿಲಯಗಳಲ್ಲಿ ಪೂರ್ಣಕಾಲಿಕವಾಗಿ ಪಿ.ಹೆಚ್.ಡಿ ಕೋರ್ಸುಗಳಲ್ಲಿ ವ್ಯಾಸಾಂಗ ಮಾಡುತ್ತಿರುವ ವಿದ್ಯಾರ್ಥಿಗಳಿಗೆ ಫೆಲೋಶಿಪ್‌ಗೆ ಅರ್ಜಿ ಸಲ್ಲಿಸುವ ಅವಧಿಯನ್ನು ಡಿಸೆಂಬರ್ 31 ರ ವರೆಗೆ ವಿಸ್ತರಿಸಲಾಗಿದೆ.

ಹೆಚ್ಚಿನ ಮಾಹಿತಿಗಾಗಿ ಅಲ್ಪಸಂಖ್ಯಾತರ ಕಲ್ಯಾಣ ಇಲಾಖೆಯ ಸಹಾಯವಾಣಿ ಸಂಖ್ಯೆ: 8277799990 ಅಥವಾ ಜಿಲ್ಲಾ ಅಲ್ಪಸಂಖ್ಯಾತರ ಕಲ್ಯಾಣ ಇಲಾಖೆ, ಮೌಲಾನಾ ಆಜಾದ್ ಭವನ, ಅಲೆವೂರು ರಸ್ತೆ, ಮಣೀಪಾಲ ದೂ.ಸಂಖ್ಯೆ: 0820-2573596 ಅನ್ನು ಸಂಪರ್ಕಿಸಬಹುದಾಗಿದೆ ಎಂದು ಪ್ರಕಟಣೆ ತಿಳಿಸಿದೆ.