ಉಡುಪಿ: ಶ್ರೀವಾಣಿ ವಿದ್ಯಾಭಿವೃದ್ಧಿ ಸಂಘ ರಜತಾದ್ರಿ-ನಡೂರು ಹಾಗೂ ನಡೂರು ದಿ. ಶಿವರಾಮ ಶೆಟ್ಟಿ ಜನ್ಮ ಶತಮಾನೋತ್ಸವ ಸಮಿತಿಯ ಜಂಟಿ ಆಶ್ರಯದಲ್ಲಿ ಸಪ್ತ ಸಂಸ್ಥೆಗಳ ಸಂಸ್ಥಾಪಕ ನಡೂರು ದಿ. ಶಿವರಾಮ ಶೆಟ್ಟಿ ಅವರ ಪುತ್ಥಳಿ ಅನಾವರಣ, ನೂತನ ಶಾಲಾ ವಾಹನ ಹಸ್ತಾಂತರ, ಉಡುಪಿ ಜಿಲ್ಲಾ ಮಟ್ಟದ ವೃತ್ತಿ ಶಿಕ್ಷಣದ ವಸ್ತು ಪ್ರದರ್ಶನ ಮತ್ತು ಕಲಿಕೋತ್ಸವ, ನಮ್ಮ ಹಿರಿಯರ ಕರಾವಳಿ ಕೃಷಿ ಉಪಕರಣಗಳ ಪ್ರದರ್ಶನ ಹಾಗೂ ಜನ್ಮ ಶತಮಾನೋತ್ಸವದ ಸಮಾರೋಪ ಸಮಾರಂಭವು ಇದೇ ಅ. 26ರಂದು ನಡೂರು ಶ್ರೀವಾಣಿ ಪ್ರೌಢಶಾಲಾ ವಠಾರದಲ್ಲಿ ನಡೆಯಲಿದೆ ಎಂದು ದಿ. ಶಿವರಾಮ ಶೆಟ್ಟಿ ಜನ್ಮ ಶತಮಾನೋತ್ಸವ ಸಮಿತಿಯ ಅಧ್ಯಕ್ಷ ರಾಜಾರಾಮ್ ಶೆಟ್ಟಿ ತಿಳಿಸಿದರು.
ಉಡುಪಿಯಲ್ಲಿಂದು ನಡೆದ ಸುದ್ದಿಗೋಷ್ಠಿಯಲ್ಲಿ ಮಾತನಾಡಿದ ಅವರು, ಅಂದು ಬೆಳಿಗ್ಗೆ 10ಗಂಟೆಗೆ ಉಡುಪಿ ಚಿಕ್ಕಮಗಳೂರು ಸಂಸದ ಕೋಟ ಶ್ರೀನಿವಾಸ ಪೂಜಾರಿ ಕಾರ್ಯಕ್ರಮವನ್ನು ಉದ್ಘಾಟಿಸಲಿದ್ದಾರೆ. ನಡೂರು ಶ್ರೀವಾಣಿ ವಿದ್ಯಾಭಿವೃದ್ಧಿ ಸಂಘದ ಅಧ್ಯಕ್ಷ ಬಿ. ಭೋಜ ಹೆಗ್ಡೆ ಅಧ್ಯಕ್ಷತೆ ವಹಿಸಲಿದ್ದಾರೆ.
ನಿವೃತ್ತ ಲೋಕಾಯುಕ್ತ ನ್ಯಾಯಮೂರ್ತಿ ಸಂತೋಷ್ ಹೆಗ್ಡೆ, ಬೆಂಗಳೂರು ನಾರಾಯಣ ಹೃದಯಾಲಯದ ಎಂಡಿ ಡಾ. ದೇವಿ ಶೆಟ್ಟಿ, ಕುಂದಾಪುರ ಶಾಸಕ ಕಿರಣ್ ಕುಮಾರ್ ಕೊಡ್ಗಿ, ಮಾಜಿ ಸಂಸದ ಕೆ. ಜಯಪ್ರಕಾಶ್ ಶೆಟ್ಟಿ ಮುಖ್ಯ ಅತಿಥಿಗಳಾಗಿ ಭಾಗವಹಿಸಲಿದ್ದಾರೆ ಎಂದರು.
ಸುದ್ದಿಗೋಷ್ಠಿಯಲ್ಲಿ ಸಮಿತಿಯ ಉಪಾಧ್ಯಕ್ಷರಾದ ಶೇಡಿಕೊಡ್ಲು ವಿಠಲ ಶೆಟ್ಟಿ, ಎನ್. ಹರೀಂದ್ರನಾಥ್ ಶೆಟ್ಟಿ, ಸಹ ಕಾರ್ಯದರ್ಶಿ ದಿನಕರ ಶೆಟ್ಟಿ ಬೈಕಾಡಿ, ಕೋಶಾಧಿಕಾರಿ ಅಶೋಕ್ ಕುಮಾರ್ ಶೆಟ್ಟಿ, ಗೌರವ ಮಾರ್ಗದರ್ಶಕರಾದ ಸಖಾರಾಮ ಸೋಮಯಾಜಿ ಇದ್ದರು.