ಆವರ್ಸೆ: ಬಸ್ ಡಿಕ್ಕಿಯಾಗಿ ಗಾಯಗೊಂಡ ಕಾಡುಕೋಣ

ಉಡುಪಿ: ಕಾಡುಕೋಣವೊಂದು ಬಸ್ ಗೆ ಡಿಕ್ಕಿ ಹೊಡೆದು ಗಾಯಗೊಂಡ ಘಟನೆ ಬ್ರಹ್ಮಾವರ ತಾಲೂಕಿನ ಆವರ್ಸೆ ಮಾವಿನಕಟ್ಟೆ ಎಂಬಲ್ಲಿ ನಡೆದಿದೆ.
ರಸ್ತೆ ದಾಟುವ ಧಾವಂತದಲ್ಲಿ ಕಾಡುಕೋಣ ಬಸ್ ಗೆ ಡಿಕ್ಕಿ ಹೊಡೆದಿದೆ. ಇದರಿಂದ ಕಾಡುಕೋಣ ಗಂಭೀರವಾಗಿ ಗಾಯಗೊಂಡಿದ್ದು, ಕೆಲಹೊತ್ತು ಅಡ್ಡಾದಿಡ್ಡಿಯಾಗಿ ಓಡಾಡಿದೆ. ಕೂಡಲೇ ಸ್ಥಳಕ್ಕೆ ಬಂದ ಅರಣ್ಯಾಧಿಕಾರಿಗಳು ಹಾಗೂ ಅರವಳಿಕೆ ತಜ್ಞರು ಕಾಡುಕೋಣಕ್ಕೆ ಅರವಳಿಕೆ ಮದ್ದು ನೀಡಿದರು. ಬಳಿಕ ಹೆಚ್ಚಿನ ಚಿಕಿತ್ಸೆಗಾಗಿ ಮಣಿಪಾಲದ ಪಶು ಆರೈಕೆ ಕೇಂದ್ರಕ್ಕೆ ಸಾಗಿಸಲಾಯಿತು.