ಇಂದಿನಿಂದ ರಾಜ್ಯದ ವಿವಿದೆಡೆ ಭಾರಿ ಮಳೆಯಾಗುವ ಸಾಧ್ಯತೆ: ಉಡುಪಿ, ದ.ಕ ಜಿಲ್ಲೆಗೆ ಯೆಲ್ಲೋ ಅಲರ್ಟ್ ಘೋಷಣೆ.

ಬೆಂಗಳೂರು: ರಾಜ್ಯದ ವಿವಿಧೆಡೆ ಶನಿವಾರ ಭಾರಿ ಮಳೆಯಾಗಿದ್ದು, ಇಂದೂ ಕೂಡಾ ಕರಾವಳಿ ಜಿಲ್ಲೆಗಳು ಹಾಗೂ ದಕ್ಷಿಣ ಒಳನಾಡಿನ ಜಿಲ್ಲೆಗಳಿಗೆ ಭಾರೀ ಮಳೆಯಾಗುವ ಸಾಧ್ಯತೆಗಳಿದ್ದು, ದಕ್ಷಿಣ ಕನ್ನಡ, ಉಡುಪಿ, ಉತ್ತರ ಕನ್ನಡ, ಚಿಕ್ಕಮಗಳೂರು ಮತ್ತು ಶಿವಮೊಗ್ಗ ಜಿಲ್ಲೆಗಳಿಗೆ ಯೆಲ್ಲೋ ಅಲರ್ಟ್ ಘೋಷಿಸಲಾಗಿದೆ.

ಸೆಪ್ಟೆಂಬರ್ 8 ರಂದು ಕರಾವಳಿ ಜಿಲ್ಲೆಗಳಾದ ದಕ್ಷಿಣ ಕನ್ನಡ, ಉಡುಪಿ ಹಾಗೂ ಉತ್ತರ ಕನ್ನಡಕ್ಕೆ ಭಾರೀ ಮಳೆಯಾಗಲಿದೆ. ಹೀಗಾಗಿ ಯೆಲ್ಲೋ ಅಲರ್ಟ್ ನೀಡಲಾಗಿದೆ. ಇನ್ನು ದಕ್ಷಿಣ ಒಳನಾಡಿನ ಜಿಲ್ಲೆಗಳಾದ ಶಿವಮೊಗ್ಗ ಹಾಸನ ಹಾಗೂ ಚಿಕ್ಕಮಗಳೂರಿಗೆ ಭಾರೀ ಮಳೆಯಾಗಲಿದ್ದು, ಇಂದು ಯೆಲ್ಲೋ ಅಲರ್ಟ್ ನೀಡಲಾಗಿದೆ.

ಬೀದರ್, ಕಲಬುರ್ಗಿ, ಯಾದಗಿರಿ, ರಾಯಚೂರು ಜಿಲ್ಲೆಗಳಲ್ಲಿ ಕೆಲವು ಸ್ಥಳಗಳಲ್ಲಿ ಹಗುರದಿಂದ ಸಾಧಾರಣ ಮಳೆ ಮತ್ತು ನಿರಂತರ ಗಾಳಿಯ ವೇಗ (40-50 ಕಿಮೀ) ಬರುವ ಸಾಧ್ಯತೆಯಿದೆ.