ಉಡುಪಿ:ಅರ್ಜಿ ಸಲ್ಲಿಕೆ : ಅವಧಿ ವಿಸ್ತರಣೆ

ಉಡುಪಿ: ಸಮಾಜ ಕಲ್ಯಾಣ ಇಲಾಖೆಯ ವತಿಯಿಂದ ಪರಿಶಿಷ್ಟ ಜಾತಿ ಮತ್ತು ಪರಿಶಿಷ್ಟ ಪಂಗಡದ ಡಾ. ಬಿ.ಆರ್.ಅಂಬೇಡ್ಕರ್ ಅನುಯಾಯಿಗಳನ್ನು ಮಹಾರಾಷ್ಟ್ರದ ನಾಗಪುರದಲ್ಲಿನ ದೀಕ್ಷಾಭೂಮಿ ಯಾತ್ರೆಗೆ ನಿಯೋಜಿಸಲು ಅರ್ಹ ಆಸಕ್ತ 18 ವರ್ಷ
ಮೇಲ್ಪಟ್ಟ ಅಭ್ಯರ್ಥಿಗಳಿಂದ ಇಲಾಖೆಯ ವೆಬ್‌ಸೈಟ್ https://swdservices.karnataka.gov.in/ ನಲ್ಲಿ ಆನ್‌ಲೈನ್‌ ಮೂಲಕ ಅರ್ಜಿ ಸಲ್ಲಿಸುವ ಅವಧಿಯನ್ನು ಸೆಪ್ಟಂಬರ್ 5 ರ ವರೆಗೆ ವಿಸ್ತರಿಸಲಾಗಿದೆ.

ಅರ್ಜಿ ಸಲ್ಲಿಸಿದ ಅಭ್ಯರ್ಥಿಗಳು ಸಂಬಂಧಿಸಿದ ಸೂಕ್ತ ದಾಖಲೆಗಳನ್ನು ಎರಡು ದಿನಗಳ ಒಳಗಾಗಿ ಉಪನಿರ್ದೇಶಕರ ಕಚೇರಿ, ಸಮಾಜ
ಕಲ್ಯಾಣ ಇಲಾಖೆ, ರಜತಾದ್ರಿ, ಬಿ ಬ್ಲಾಕ್, ಎರಡನೇ ಮಹಡಿ, ಮಣಿಪಾಲ, ಉಡುಪಿ ದೂ.ಸಂಖ್ಯೆ: 0820-2574892 ಅನ್ನು ಸಂಪರ್ಕಿಸಬಹುದಾಗಿದೆ ಎಂದು ಪ್ರಕಟಣೆ ತಿಳಿಸಿದೆ.