ಉಡುಪಿ: ಪ್ರಸಕ್ತ ಸಾಲಿನಲ್ಲಿ ಪರಿಶಿಷ್ಟ ವರ್ಗದ ಕಲ್ಯಾಣ ನಿರ್ದೇಶನಾಲಯದ ವತಿಯಿಂದ ಪರಿಶಿಷ್ಟ ವರ್ಗಗಳ ಕಾನೂನು ಪದವೀಧರರಿಗೆ ಆಡಳಿತ ನ್ಯಾಯಾಧೀಕರಣದಲ್ಲಿ ಹೆಚ್ಚಿನ ತರಬೇತಿ ಪಡೆಯಲು ಪರಿಶಿಷ್ಟ ವರ್ಗದ, ಆದಾಯ ಮಿತಿ 2 ಲಕ್ಷದೊಳಗಿನ ಕಾನೂನು ಪದವೀಧರರಿಂದ ವೆಬ್ಸೈಟ್ WWW.tw.kar.nic.in ನಲ್ಲಿ ಆನ್ಲೈನ್ ಮೂಲಕ ಅರ್ಜಿ ಆಹ್ವಾನಿಸಲಾಗಿದೆ.
ಅರ್ಜಿ ಸಲ್ಲಸಲು ಅಕ್ಟೋಬರ್ 7 ಕೊನೆಯ ದಿನ. ಹೆಚ್ಚಿನ ಮಾಹಿತಿಗಾಗಿ ಯೋಜನಾ ಸಮನ್ವಯಾಧಿಕಾರಿಗಳ ಕಛೇರಿ, ಸಮಗ್ರ ಗಿರಿಜನ ಅಭಿವೃದ್ಧಿ ಯೋಜನೆ, ಉಡುಪಿ ದೂ.ಸಂಖ್ಯೆ: 0820-2574814 ಅನ್ನು ಸಂಪರ್ಕಿಸಬಹುದಾಗಿದೆ ಎಂದು ಇಲಾಖೆಯ ಪ್ರಕಟಣೆ ತಿಳಿಸಿದೆ.