ಉಡುಪಿ:ಕ್ರೀಡಾ ಪೋಷಕ ಪ್ರಶಸ್ತಿ: ಅರ್ಜಿ ಆಹ್ವಾನ

ಉಡುಪಿ: ಯುವ ಸಬಲೀಕರಣ ಮತ್ತು ಕ್ರೀಡಾ
ಇಲಾಖಾ ವತಿಯಿಂದ ರಾಜ್ಯದ ಕ್ರೀಡಾ ಪೋಷಕರಿಗೆ ಪ್ರೋತ್ಸಾಹ ನೀಡುವ ಉದ್ದೇಶದಿಂದ ಕ್ರೀಡಾ ಪೋಷಕ ಪ್ರಶಸ್ತಿಯನ್ನು ನೀಡುತ್ತಿದ್ದು, ಕ್ರೀಡಾ ಕ್ಷೇತ್ರದಲ್ಲಿ ತಮ್ಮನ್ನು
ತೊಡಗಿಸಿಕೊಂಡು, ಕ್ರೀಡಾ ಕ್ಷೇತ್ರದಲ್ಲಿ ಅಭಿವೃಧ್ಧಿಗೆ ನೆರವು ನೀಡಿ ಕಳೆದ ಐದು ವರ್ಷಗಳಲ್ಲಿ ರಾಜ್ಯ,ರಾಷ್ಟ್ರೀಯ ಹಾಗೂಅಂತರಾಷ್ಟ್ರೀಯ ಕ್ರೀಡಾ ಕ್ಷೇತ್ರದಲ್ಲಿ ಕೊಡುಗೆ ನೀಡಿದ ಕ್ರೀಡಾಪೋಷಕರಿಂದ ಪ್ರಶಸ್ತಿಗೆ ಅರ್ಜಿ ಆಹ್ವಾನಿಸಲಾಗಿದೆ.

ಅರ್ಜಿ ಸಲ್ಲಿಸಲು ಸೆಪ್ಟಂಬರ್ 5 ಕೊನೆಯ ದಿನ. ಅರ್ಜಿ ನಮೂನೆ ಹಾಗೂ ಹೆಚ್ಚಿನ ಮಾಹಿತಿಗಾಗಿ ಸಹಾಯಕ ನಿರ್ದೇಶಕರು, ಯುವ ಸಬಲೀಕರಣ ಮತ್ತು ಕ್ರೀಡಾ ಇಲಾಖೆ ಉಡುಪಿ ದೂ.ಸಂ:0820-2521324 ಅಥವಾ ಮೊ.ನಂ:9480886467 ಅನ್ನು ಸಂಪರ್ಕಿಸಬಹುದಾಗಿದೆ ಎಂದು ಇಲಾಖೆಯ ಪ್ರಕಟಣೆ ತಿಳಿಸಿದೆ.