ಉಡುಪಿ: ಜಿಲ್ಲೆಯ ಕುಂದಾಪುರ ತಾಲೂಕು ವ್ಯಾಪ್ತಿಯಲ್ಲಿ ಬರುವ 45- ಗಂಗೊಳ್ಳಿ ಗ್ರಾಮ ಪಂಚಾಯತ್‌ಗೆ ಸಂಬಂಧಿಸಿದಂತೆ, ಕರ್ನಾಟಕ ಪಂಚಾಯತ್ ರಾಜ್ (ಗ್ರಾಮ ಪಂಚಾಯತ್ ಅಧ್ಯಕ್ಷ ಮತ್ತು ಉಪಾಧ್ಯಕ್ಷರ ಚುನಾವಣೆ) ನಿಯಮ 1995 ರ ನಿಯಮ (3) ಹಾಗೂ ಕರ್ನಾಟಕ ಪಂಚಾಯತ್ ರಾಜ್ ಅಧಿನಿಯಮ 1993 ರ ಪ್ರಕರಣ 45(1) ರಂತೆ ಪ್ರದತ್ತವಾದ ಅಧಿಕಾರವನ್ನು ಚಲಾಯಿಸಿ, ಗಂಗೊಳ್ಳಿ ಗ್ರಾಮ ಪಂಚಾಯತ್‌ನ ಮೊದಲ ಅವಧಿಗೆ ಅಧ್ಯಕ್ಷ ಹಾಗೂ ಉಪಾಧ್ಯಕ್ಷ ಸ್ಥಾನ ಆಯ್ಕೆ ಮಾಡುವ ಸಲುವಾಗಿ ಕುಂದಾಪುರ ತಾಲೂಕು ಅಕ್ಷರ ದಾಸೋಹ ಸಹಾಯಕ ನಿರ್ದೇಶಕ ಅರುಣ್ ಕುಮಾರ್ ಶೆಟ್ಟಿ ಮೊ.ನಂ: 9449143880 ಇವರನ್ನು ಗೊತ್ತುಪಡಿಸಿದ ಅಧಿಕಾರಿಯಾಗಿ ನೇಮಕ ಮಾಡಿ, ಅಪರ ಜಿಲ್ಲಾಧಿಕಾರಿ ಮಮತಾ ದೇವಿ ಜಿ.ಎಸ್ ಆದೇಶಿಸಿರುತ್ತಾರೆ.