ಉಡುಪಿ: ಸಮಾಜ ಕಲ್ಯಾಣ ಇಲಾಖೆಯ ವತಿಯಿಂದ 2025-26 ನೇ ಸಾಲಿನಲ್ಲಿ ಡಾ. ಬಾಬು ಜಗಜೀವನರಾಮರವರ 118 ನೇ ಹಾಗೂ ಡಾ. ಬಿ.ಆರ್ ಅಂಬೇಡ್ಕರ್ ರವರ 134 ನೇ ಜನ್ಮ ದಿನಾಚರಣೆ ಅಂಗವಾಗಿ ಪ್ರಶಸ್ತಿ ನೀಡುವ ಬಗ್ಗೆ ಪರಿಶಿಷ್ಟ ಜಾತಿ
ಹಾಗೂ ಪರಿಶಿಷ್ಟ ವರ್ಗದ ಜನಾಂಗದವರ ಶ್ರೇಯಸ್ಸಿಗಾಗಿ ಪ್ರೋತ್ಸಾಹಿಸಿ ಶ್ರಮಿಸಿ ಗಣನೀಯ ಸೇವೆ ಸಲ್ಲಿಸಿದ ಅರ್ಹ ವ್ಯಕ್ತಿಗಳನ್ನು ಗುರುತಿಸಿ ಡಾ.ಬಾಬು ಜಗಜೀವನರಾಮ್ ಹಾಗೂ ಡಾ.ಬಿ.ಆರ್ ಅಂಬೇಡ್ಕರ್ ಪ್ರಶಸ್ತಿಗಳನ್ನು ನೀಡಿ ಗೌರವಿಸಲು ಉದ್ದೇಶಿಸಲಾಗಿದ್ದು, ಜಿಲ್ಲೆಗೆ ಸಂಬಂಧಿಸಿದಂತೆ ಪರಿಶಿಷ್ಟ ಜಾತಿ/ಪರಿಶಿಷ್ಟ ವರ್ಗದ ಜನಾಂಗದವರ ಶ್ರೇಯಸ್ಸಿಗಾಗಿ ಪ್ರೋತ್ಸಾಹಿಸಿ ಶ್ರಮಿಸಿ ಗಣನೀಯ ಸೇವೆ ಸಲ್ಲಿಸಿದ ಅರ್ಹ ವ್ಯಕ್ತಿಗಳಿಂದ ಪ್ರಶಸ್ತಿಗೆ ಅರ್ಜಿ ಆಹ್ವಾನಿಸಲಾಗಿದೆ.
ಅರ್ಜಿ ಸಲ್ಲಿಸಲು ಫೆಬ್ರವರಿ 22 ಕೊನೆಯ ದಿನ. ಅರ್ಜಿ ನಮೂನೆ ಹಾಗೂ ಹೆಚ್ಚಿನ ಮಾಹಿತಿಗಾಗಿ ಸಹಾಯಕ ನಿರ್ದೇಶಕರ ಕಛೇರಿ,
ಸಮಾಜ ಕಲ್ಯಾಣ ಇಲಾಖೆ, ಉಡುಪಿ, ಕುಂದಾಪುರ ಮತ್ತು ಕಾರ್ಕಳ ತಾಲೂಕು ಅಥವಾ ಉಪನಿರ್ದೇಶಕರು, ಸಮಾಜ ಕಲ್ಯಾಣ ಇಲಾಖೆ, ರಜತಾದ್ರಿ, ಮಣಿಪಾಲ, ಉಡುಪಿ ಕಚೇರಿಯನ್ನು ಸಂಪರ್ಕಿಸಬಹುದಾಗಿದೆ ಎಂದು ಸಮಾಜ ಕಲ್ಯಾಣ ಇಲಾಖೆಯ ಉಪನಿರ್ದೇಶಕರ ಕಚೇರಿ
ಪ್ರಕಟಣೆ ತಿಳಿಸಿದೆ.












