ಉಡುಪಿ:ನಾಳೆ ಮಾ.08 ರಂದು ಅಂತರಾಷ್ಟ್ರೀಯ ಮಹಿಳಾ ದಿನಾಚರಣೆ

ಉಡುಪಿ: ಜಿಲ್ಲಾಡಳಿತ, ಜಿಲ್ಲಾ ಪಂಚಾಯತ್, ಜಿಲ್ಲಾ ಕಾನೂನು ಸೇವೆಗಳ ಪ್ರಾಧಿಕಾರ, ಮಹಿಳಾ ಮತ್ತು ಮಕ್ಕಳ ಅಭಿವೃದ್ಧಿ ಇಲಾಖೆ, ಕನ್ನಡ ಮತ್ತು ಸಂಸ್ಕೃತಿ ಇಲಾಖೆ, ಜಿಲ್ಲಾ ಹಾಗೂ ತಾಲೂಕು ಮಹಿಳಾ ಮಂಡಲಗಳ ಒಕ್ಕೂಟ, ಜಿಲ್ಲಾ ಹಾಗೂ ತಾಲೂಕು ಸ್ತ್ರೀ ಶಕ್ತಿ ಒಕ್ಕೂಟ ಹಾಗೂ ಪರ್ಯಾಯ ಶ್ರೀ ಪುತ್ತಿಗೆ ಮಠ ಉಡುಪಿ ಇವರ ಸಂಯುಕ್ತ ಆಶ್ರಯದಲ್ಲಿ ಅಂತರಾಷ್ಟ್ರೀಯ ಮಹಿಳಾ ದಿನಾಚರಣೆ ಕಾರ್ಯಕ್ರಮವು ಮಾರ್ಚ್ 8 ರಂದು ಬೆಳಗ್ಗೆ 10 ಗಂಟೆಗೆ ನಗರದ ರಾಜಾಂಗಣದ ಶ್ರೀ ಕೃಷ್ಣ ಮಠದ ಆವರಣದಲ್ಲಿ ನಡೆಯಲಿದೆ.

ಪರ್ಯಾಯ ಶ್ರೀ ಪುತ್ತಿಗೆ ಮಠದ ಪರ್ಯಾಯ ಪೀಠಾಧಿಕಾರಿಗಳಾದ ಶ್ರೀ ಶ್ರೀ ಸುಗುಣೇಂದ್ರ ತೀರ್ಥ ಶ್ರೀಪಾದರು ದಿವ್ಯ ಉಪಸ್ಥಿತಿ ವಹಿಸಲಿದ್ದಾರೆ.

ಕಾರ್ಯಕ್ರಮವನ್ನು ಮಹಿಳಾ ಮತ್ತು ಮಕ್ಕಳ ಅಭಿವೃದ್ಧಿ, ವಿಕಲಚೇತನರ ಮತ್ತು ಹಿರಿಯ ನಾಗರಿಕರ ಸಬಲೀಕರಣ ಇಲಾಖೆ ಹಾಗೂ ಜಿಲ್ಲಾ ಉಸ್ತುವಾರಿ ಸಚಿವೆ ಲಕ್ಷ್ಮೀ ಆರ್. ಹೆಬ್ಬಾಳ್ಕರ್ ಉದ್ಘಾಟಿಸಲಿದ್ದು, ಶಾಸಕ ಯಶ್‌ಪಾಲ್ ಎ ಸುವರ್ಣ ಅಧ್ಯಕ್ಷತೆ ವಹಿಸಲಿದ್ದಾರೆ.

ಕಾರ್ಯಕ್ರಮದಲ್ಲಿ ಸಂಸದರಾದ ಬಿ.ವೈ ರಾಘವೇಂದ್ರ ಹಾಗೂ ಕೋಟ ಶ್ರೀನಿವಾಸ ಪೂಜಾರಿ, ಶಾಸಕರುಗಳಾದ ವಿ ಸುನಿಲ್ ಕುಮಾರ್, ಗುರುರಾಜ್ ಶೆಟ್ಟಿ ಗಂಟಿಹೊಳೆ, ಎ ಕಿರಣ್ ಕುಮಾರ್ ಕೊಡ್ಗಿ ಹಾಗೂ ಗುರ್ಮೆ ಸುರೇಶ್ ಶೆಟ್ಟಿ, ವಿಧಾನಪರಿಷತ್ ಶಾಸಕರುಗಳಾದ ಎಸ್.ಎಲ್. ಭೋಜೇಗೌಡ, ಮಂಜುನಾಥ್ ಭಂಡಾರಿ, ಡಾ. ಧನಂಜಯ ಸರ್ಜಿ ಹಾಗೂ ಕಿಶೋರ್ ಕುಮಾರ್ ಪುತ್ತೂರು, ನಗರಸಭೆ ಅಧ್ಯಕ್ಷ ಪ್ರಭಾಕರ ಪೂಜಾರಿ, ನಗರಾಭಿವೃಧ್ದಿ ಪ್ರಾಧಿಕಾರದ ಅಧ್ಯಕ್ಷ ದಿನಕರ ಹೇರೂರು, ಜಿಲ್ಲಾ ಉಸ್ತುವಾರಿ ಕಾರ್ಯದರ್ಶಿ ಸತ್ಯವತಿ ಜಿ, ಜಿಲ್ಲಾಧಿಕಾರಿ ಡಾ. ಕೆ ವಿದ್ಯಾಕುಮಾರಿ, ಜಿಲ್ಲಾ ಪಂಚಾಯತ್ ಮುಖ್ಯ ಕಾರ್ಯನಿರ್ವಹಣಾಧಿಕಾರಿ ಪ್ರತೀಕ್ ಬಾಯಲ್, ಜಿಲ್ಲಾ ಪೊಲೀಸ್ ಅಧೀಕ್ಷಕ ಡಾ. ಅರುಣ್ ಕೆ, ಹಿರಿಯ ಸಿವಿಲ್ ನ್ಯಾಯಾಧೀಶ ಹಾಗೂ ಜಿಲ್ಲಾ ಕಾನೂನು ಸೇವಾ ಪ್ರಾಧಿಕಾರದ ಸದಸ್ಯ ಕಾರ್ಯದರ್ಶಿ ಪಿ.ಆರ್ ಯೋಗೀಶ್, ಕನ್ನಡ ಮತ್ತು ಸಂಸ್ಕೃತಿ ಇಲಾಖೆಯ ಸಹಾಯಕಿ ನಿರ್ದೇಶಕಿ ಪೂರ್ಣಿಮಾ ಹಾಗೂ ಮತ್ತಿತರರು ಭಾಗವಹಿಸಲಿದ್ದು, ಸಂಪನ್ಮೂಲ ವ್ಯಕ್ತಿಗಳಾಗಿ ವೈಕುಂಠ ಬಾಳಿಗಾ ಕಾನೂನು ಮಹಾವಿದ್ಯಾಲಯದ ನಿರ್ದೇಶಕಿ ನಿರ್ಮಲಾ ಕುಮಾರಿ ಹಾಗೂ ಉದ್ಯಮಿ ದಿವ್ಯಾ ರಾಣಿ ಸಂಪನ್ಮೂಲ ವ್ಯಕ್ತಿಗಳಾಗಿ ಮಾಹಿತಿ ನೀಡಲಿದ್ದಾರೆ.