ಉಡುಪಿ:ನೇರ ಸಂದರ್ಶನ

ಉಡುಪಿ: ಕೈಗಾರಿಕಾ ತರಬೇತಿ ಮತ್ತು ಉದ್ಯೋಗ ಇಲಾಖೆಯ ವತಿಯಿಂದ ನವೆಂಬರ್ 22 ರಂದು ಬೆಳಗ್ಗೆ
10.30 ಕ್ಕೆ ಶಾಂತ ಎಲೆಕ್ಟ್ರಿಕಲ್ಸ್ ಪ್ರೈ,ಲಿ., ಆಭರಣ ಜುವೆಲ್ಲರ್ಸ್ ಹತ್ತಿರ, ಕಾರ್ಪೊರೇಶನ್ ಬ್ಯಾಂಕ್ ರೋಡ್, ಅನುರಾಗ ಕಾಂಪ್ಲೆಕ್ಸ್, ಉಡುಪಿ ಇಲ್ಲಿ ನೇರ ಸಂದರ್ಶನ ಆಯೋಜಿಸಲಾಗಿದೆ.

ಎಸ್.ಎಸ್.ಎಲ್.ಸಿ, ಪಿ.ಯು.ಸಿ, ಐ.ಟಿ.ಐ, ಡಿಪ್ಲೋಮಾ, ಬಿ.ಇ ಇಂಜಿನಿಯರಿಂಗ್ ಹಾಗೂ ಇತರೆ ಪದವಿ ವಿದ್ಯಾರ್ಹತೆಯೊಂದಿಗೆ ಉತ್ತೀರ್ಣರಾದ ಅಭ್ಯರ್ಥಿಗಳು ತಮ್ಮ ಅಂಕಪಟ್ಟಿ, ಸ್ವವಿವರವುಳ್ಳ ರೆಸ್ಯೂಮ್/ಸಿವಿ ಹಾಗೂ ಆಧಾರ್‌ಕಾರ್ಡ್ ಪ್ರತಿಯೊಂದಿಗೆ ನೇರ ಸಂದರ್ಶನದಲ್ಲಿ ಭಾಗವಹಿಸಬಹುದಾಗಿದೆ.

ಹೆಚ್ಚಿನ ಮಾಹಿತಿಗಾಗಿ ಜಿಲ್ಲಾ ಉದ್ಯೋಗ ವಿನಿಮಯ ಕಛೇರಿ, ಜಿಲ್ಲಾಧಿಕಾರಿ ಸಂಕೀರ್ಣ, ರಜತಾದ್ರಿ, ಮಣಿಪಾಲ, ಉಡುಪಿ ದೂರವಾಣಿ
ಸಂಖ್ಯೆ: 8105618291, 9945856670, 8105774936 ಹಾಗೂ 9901472710 ಅನ್ನು ಸಂಪರ್ಕಿಸಬಹುದಾಗಿದೆ ಎಂದು ಪ್ರಕಟಣೆ
ತಿಳಿಸಿದೆ.