ಉಡುಪಿ:ಪಿ.ಜಿ.ಸಿ.ಇ.ಟಿ ಪರೀಕ್ಷೆ : ನಿಷೇಧಾಜ್ಞೆ ಜಾರಿ

ಉಡುಪಿ: ಕರ್ನಾಟಕ ಪರೀಕ್ಷಾ ಪ್ರಾಧಿಕಾರದ
ವತಿಯಿಂದ ಎಂ.ಬಿ.ಎ ಮತ್ತು ಎಂ.ಸಿ.ಎ ಕೋರ್ಸುಗಳಿಗೆ ಪಿ.ಜಿ.ಸಿ.ಇ.ಟಿ ಪರೀಕ್ಷೆಯು ಆಗಸ್ಟ್ 4 ರಂದು ಜಿಲ್ಲೆಯ 8 ಪರೀಕ್ಷಾ ಕೇಂದ್ರಗಳಲ್ಲಿ ನಡೆಯಲಿದ್ದು, ಪರೀಕ್ಷೆಯು ಸುಸೂತ್ರವಾಗಿ
ಮತ್ತು ದೋಷರಹಿತವಾಗಿ ನಡೆಸಲು ಹಾಗೂ ನಡೆಯಬಹುದಾದ ಎಲ್ಲಾ ರೀತಿಯ ಅವ್ಯವಹಾರಗಳನ್ನು ತಡೆಗ್ಟಟ್ಟುವ ನಿಟ್ಟಿನಲ್ಲಿ
ನಿಗಧಿಪಡಿಸಿದ ಎಲ್ಲಾ ಪರೀಕ್ಷಾ ಕೇಂದ್ರದ ಸುತ್ತಲೂ 200 ಮೀ. ಪ್ರದೇಶವನ್ನು ನಿಷೇಧಿತ ಪ್ರದೇಶವೆಂದು ಘೋಷಿಸಿ 1973 ರ ಕ್ರಿಮಿನಲ್ ಪ್ರೊಸೀಜರ್ ಕೋಡ್‌ನ ಸೆಕ್ಷನ್ 144(1) ರಂತೆ ನಿಷೇಧಾಜ್ಞೆ
ಜಾರಿಗೊಳಿಸಿ ಜಿಲ್ಲಾಧಿಕಾರಿ ಹಾಗೂ ಜಿಲ್ಲಾ ದಂಡಾಧಿಕಾರಿ ಡಾ. ಕೆ ವಿದ್ಯಾಕುಮಾರಿ
ಆದೇಶಿಸಿರುತ್ತಾರೆ.