ಉಡುಪಿ: ಜಿಲ್ಲೆಯಲ್ಲಿ ಪ್ರಥಮ ಡಿ.ಇಎಲ್.ಇಡಿ ಪರೀಕ್ಷೆಯು ಸೆಪ್ಟಂಬರ್ 19 ರಿಂದ 25 ರ ವರೆಗೆ ನಗರದ ಜಿಲ್ಲಾ ಶಿಕ್ಷಣ ಮತ್ತು ತರಬೇತಿ ಸಂಸ್ಥೆಯಲ್ಲಿ ನಡೆಯಲಿದ್ದು, ಪರೀಕ್ಷೆಯು ಸುಸೂತ್ರವಾಗಿ ಮತ್ತು ದೋಷರಹಿತವಾಗಿ ನಡೆಸಲು ಹಾಗೂ
ನಡೆಯಬಹುದಾದ ಎಲ್ಲಾ ರೀತಿಯ ಅವ್ಯವಹಾರಗಳನ್ನು ತಡೆಗಟ್ಟುವ ನಿಟ್ಟಿನಲ್ಲಿ ನಿಗಧಿಪಡಿಸಿದ ಪರೀಕ್ಷಾ ಕೇಂದ್ರದ ಸುತ್ತಲೂ 200
ಮೀ. ಪ್ರದೇಶವನ್ನು ನಿಷೇಧಿತ ಪ್ರದೇಶವೆಂದು ಘೋಷಿಸಿ, ಭಾರತೀಯ ನಾಗರೀಕ ಸುರಕ್ಷಾ ಸಂಹಿತೆ 2023 ರ ಕಲಂ 163 ಅನ್ವಯ ನಿಷೇಧಾಜ್ಞೆ ಜಾರಿಗೊಳಿಸಿ, ಜಿಲ್ಲಾಧಿಕಾರಿ ಹಾಗೂ ಜಿಲ್ಲಾ ದಂಡಾಧಿಕಾರಿ ಡಾ, ಕೆ ವಿದ್ಯಾ ಕುಮಾರಿ ಆದೇಶಿಸಿರುತ್ತಾರೆ.