ಉಡುಪಿ:ಬಜೆಟ್ ತಯಾರಿ: ಪೂರ್ವಭಾವಿ ಸಭೆ

ಉಡುಪಿ: ಉಡುಪಿ ನಗರಸಭೆಯ 2025-26 ನೇ ಸಾಲಿನ ಬಜೆಟ್ ತಯಾರಿಯ ಬಗ್ಗೆ ನಗರಸಭಾ ವ್ಯಾಪ್ತಿಯಲ್ಲಿ ಕೈಗೊಳ್ಳಬಹುದಾದ ಅವಶ್ಯಕ ಅಭಿವೃದ್ಧಿ ಕೆಲಸ ಕಾರ್ಯಗಳ ವಿಚಾರ ವಿನಿಮಯಗಳ ಕುರಿತು ಎರಡನೇ ಸುತ್ತಿನ ಪೂರ್ವಭಾವಿ ಸಾರ್ವಜನಿಕ ಸಮಾಲೋಚನಾ ಸಭೆಯು ಡಿಸೆಂಬರ್ 30 ರಂದು ಮಧ್ಯಾಹ್ನ 3 ಗಂಟೆಗೆ ನಗರಸಭೆಯ ಸತ್ಯಮೂರ್ತಿ ಸಭಾಂಗಣದಲ್ಲಿ, ನಗರಸಭಾ ಅಧ್ಯಕ್ಷ ಪ್ರಭಾಕರ ಪೂಜಾರಿ ಅಧ್ಯಕ್ಷತೆಯಲ್ಲಿ ನಡೆಯಲಿದ್ದು, ಸಾರ್ವಜನಿಕರು ಸದರಿ ಸಭೆಯಲ್ಲಿ ಭಾಗವಹಿಸಿ, ಸಲಹೆ-ಸೂಚನೆಗಳನ್ನು ನೀಡುವಂತೆ ನಗರಸಭೆ ಪೌರಾಯುಕ್ತರ ಕಚೇರಿ ಪ್ರಕಟಣೆ ತಿಳಿಸಿದೆ.