ಉಡುಪಿ:ಬಿ.ಇಡಿ ಕೋರ್ಸಿಗೆ ದಾಖಲಾತಿ ಆರಂಭ: ಅರ್ಜಿ ಆಹ್ವಾನ

ಉಡುಪಿ : ಪ್ರಸಕ್ತ ಸಾಲಿನ ವ್ಯಾಸಂಗಕ್ಕಾಗಿ ರಾಜ್ಯದ ಸರ್ಕಾರಿ ಮಾನ್ಯತೆ ಪಡೆದ ಅನುದಾನಿತ ಹಾಗೂ
ಅನುದಾನರಹಿತ ಬಿ.ಇಡಿ ಕಾಲೇಜುಗಳಲ್ಲಿನ ಸರಕಾರಿ ಕೋಟಾದಡಿ ಸೀಟುಗಳ ದಾಖಲಾತಿಗಾಗಿ ಅರ್ಹ ಅಭ್ಯರ್ಥಿಗಳು ಇಲಾಖಾ ವೆಬ್‌ಸೈಟ್‌ನಲ್ಲಿ ಆನ್‌ಲೈನ್ ಮೂಲಕ ನವೆಂಬರ್ 14 ರ ವರೆಗೆ ಅರ್ಜಿ ಸಲ್ಲಿಸಬಹುದಾಗಿದೆ.

ವೆಬ್‌ಸೈಟ್ www.schooleducation.karnataka.gov.in ನಲ್ಲಿ ಅಧಿಸೂಚನೆಯನ್ನು ಪ್ರಕಟಿಸಲಾಗಿದ್ದು, ಇದರಲ್ಲಿ
ನೋಡಲ್ ಕೇಂದ್ರದ ವಿವರ, ಅರ್ಹತೆ, ಮೀಸಲಾತಿ, ಶುಲ್ಕ ಇತ್ಯಾದಿ ವಿವರ ಮತ್ತು ಜಿಲ್ಲಾವಾರು ಬಿ.ಇಡಿ ಶಿಕ್ಷಣ ಸಂಸ್ಥೆಗಳ ಪಟ್ಟಿಯನ್ನು ನೀಡಲಾಗಿದ್ದು, ಅಭ್ಯರ್ಥಿಗಳು ಅಧಿಸೂಚನೆಯನ್ನು ಓದಿ, ಅರ್ಥೈಸಿಕೊಂಡು ಆನ್‌ಲೈನ್ ಅರ್ಜಿಯನ್ನು ಕ್ರಮಬದ್ಧವಾಗಿ ಭರ್ತಿ ಮಾಡಿ ಸಲ್ಲಿಸಬಹುದಾಗಿದೆ.

ಹೆಚ್ಚಿನ ಮಾಹಿತಿಗಾಗಿ ಡಯಟ್ ಉಪನ್ಯಾಸಕಿ ಹಾಗೂ ಜಿಲ್ಲಾ ನೋಡೆಲ್ ಅಧಿಕಾರಿ ಸೋನಿಕ್ ಟಿ ಮೊ.ನಂ:9901236348 ಅನ್ನು
ಸಂಪರ್ಕಿಸಬಹುದಾಗಿದೆ ಎಂದು ಜಿಲ್ಲಾ ಶಿಕ್ಷಣ ಮತ್ತು ತರಬೇತಿ ಸಂಸ್ಥೆಯ ಉಪನಿರ್ದೇಶಕರ ಕಚೇರಿ ಪ್ರಕಟಣೆ ತಿಳಿಸಿದೆ.