ಉಡುಪಿ ಬ್ಲಾಕ್ ಕಾಂಗ್ರೆಸ್ ಸಮಿತಿ ಹಾಗೂ ಉಡುಪಿ ಸರಕಾರಿ ಜಿಲ್ಲಾಸ್ಪತ್ರೆ ಇವರ ಸಹಯೋಗದಲ್ಲಿ ಬ್ರಹ್ಮಗಿರಿಯ ಕಾಂಗ್ರೆಸ್ ಭವನದಲ್ಲಿ ತಾ. 20.10.2024ನೇ ಆದಿತ್ಯವಾರದಂದು ಬೆಳಿಗ್ಗೆ 8.00 ಗಂಟೆಯಿಂದ ಸ್ವಯಂಪ್ರೇರಿತ ಬೃಹತ್ ರಕ್ತದಾನ ಶಿಬಿರವು ನಡೆಯಲಿದೆ.
ಬೆಳಿಗ್ಗೆ 10.00 ಗಂಟೆಗೆ ದೀಪ ಬೆಳಗಿಸುವುದರ ಮೂಲಕ ಈ ರಕ್ತದಾನ ಶಿಬಿರ ಉದ್ಘಾಟನೆಗೊಳ್ಳಲಿದೆ.
ಈ ಉದ್ಘಾಟನಾ ಸಮಾರಂಭದಲ್ಲಿ ನಾಯಕರಾದ ಅಶೋಕ್ ಕುಮಾರ್ ಕೊಡವೂರು, ವಿನಯ್ ಕುಮಾರ್ ಸೊರಕೆ, ಜಯಪ್ರಕಾಶ್ ಹೆಗ್ಡೆ, ಮಂಜುನಾಥ್ ಭಂಡಾರಿ, ಗೋಪಾಲ್ ಪೂಜಾರಿ, ಮುನಿಯಾಲು ಉದಯ್ ಶೆಟ್ಟಿ, ದಿನೇಶ್ ಹೆಗ್ಡೆ ಮೊಳಹಳ್ಳಿ, ಪ್ರಸಾದ್ ರಾಜ್ ಕಾಂಚನ್, ರಮೇಶ್ ಕಾಂಚನ್, ವೆರೋನಿಕಾ ಕರ್ನೇಲಿಯೋ, ಜ್ಯೋತಿ ಹೆಬ್ಬಾರ್ ಹಾಗೂ ಮಮತಾ ಶೆಟ್ಟಿ ಉಪಸ್ಥಿತರಿರುವರು.
ಮಾಧ್ಯಮ ಮಿತ್ರರಾದ ತಾವು ಈ ಕಾರ್ಯಕ್ರಮದಲ್ಲಿ ಉಪಸ್ಥಿತರಿದ್ದು ಈ ಕಾರ್ಯಕ್ರಮದ ಪ್ರಸಾರ ಮಾಡಬೇಕೆಂದು ತಮ್ಮಲ್ಲಿ ಕಳಕಳಿಯ ವಿನಂತಿ.












