ಉಡುಪಿ: ಕರ್ನಾಟಕ ರಾಜ್ಯ ಮಕ್ಕಳ ಹಕ್ಕುಗಳ ರಕ್ಷಣಾ ಆಯೋಗ, ಬೆಂಗಳೂರು ಇವರ ವತಿಯಿಂದ ಜಿಲ್ಲೆಯಲ್ಲಿ ಮಕ್ಕಳ ರಕ್ಷಣೆಗೆ ಸಂಬಂಧಿಸಿದಂತೆ ವಿವಿಧ ಕಾರ್ಯಕ್ರಮಗಳನ್ನು ಹಮ್ಮಿಕೊಳ್ಳಲಾಗಿದ್ದು, ಜನವರಿ 03 ರಂದು ಬೆಳಗ್ಗೆ 10 ಗಂಟೆಗೆ ಉಡುಪಿ ತಾಲೂಕು ಪಂಚಾಯತ್ ಸಭಾಂಗಣದಲ್ಲಿ ಮಕ್ಕಳ ರಕ್ಷಣಾ ನೀತಿ ಹಾಗೂ ಕಾಯ್ದೆಗಳ ಕುರಿತು ಉಡುಪಿ ತಾಲೂಕು ಮಟ್ಟದ ಅಧಿಕಾರಿಗಳಿಗೆ ತರಬೇತಿ ಕಾರ್ಯಾಗಾರ, ಅಂದು ಮಧ್ಯಾಹ್ನ 2.30 ಕ್ಕೆ ಬ್ರಹ್ಮಾವರದ ಕರ್ನಾಟಕ ಪಬ್ಲಿಕ್ ಸ್ಕೂಲ್‌ನಲ್ಲಿ ಮಕ್ಕಳ ಹಕ್ಕುಗಳ ಕುರಿತು ಅಹವಾಲು ಸ್ವೀಕಾರ ಹಾಗೂ ಸಂವಾದ ಕಾರ್ಯಕ್ರಮ ಹಾಗೂ ಜನವರಿ 04 ರಂದು ಬೆಳಗ್ಗೆ 10 ಗಂಟೆಗೆ ನಗರದ ಬಾಲಕಿಯರ ಪದವಿ ಪೂರ್ವ ಕಾಲೇಜಿನ ಸವ್ಯಸಾಚಿ ಸಭಾಂಗಣದ ಶಾಲೆಯಲ್ಲಿ ಶಿಕ್ಷಣದ ಜೊತೆಗೆ ರಕ್ಷಣೆ ಶಿಕ್ಷಣ, ಕಾರ್ಮಿಕ ಹಾಗೂ ಪೊಲೀಸ್ ಇಲಾಖೆಯ ಅಧಿಕಾರಿಗಳಿಗೆ ಕಾರ್ಯಾಗಾರ ನಡೆಯಲಿದೆ ಎಂದು ಜಿಲ್ಲಾ ಮಕ್ಕಳ ರಕ್ಷಣಾಧಿಕಾರಿಗಳ ಕಚೇರಿ ಪ್ರಕಟಣೆ ತಿಳಿಸಿದೆ.