ಉಡುಪಿ:ಮೂರು ದಿನಗಳ ಕಮ್ಮಟ: ಅರ್ಜಿ ಆಹ್ವಾನ

ಉಡುಪಿ: ಕರ್ನಾಟಕ ಸಾಹಿತ್ಯ ಅಕಾಡೆಮಿಯು ಕರ್ನಾಟಕ ಜಾನಪದ ವಿಶ್ವವಿದ್ಯಾಲಯ ಗೊಟಗೋಡಿ, ಹಾವೇರಿ
ಜಿಲ್ಲೆ ಇವರ ಸಹಯೋಗದಲ್ಲಿ ಗಿರಿಜನ ಉಪಯೋಜನೆಯಡಿ ಕನ್ನಡ ಸಾಹಿತ್ಯ ಮತ್ತು ಸಾಂವಿಧಾನಿಕ ಮೌಲ್ಯಗಳು ಎಂಬ ಹೆಸರಿನಲ್ಲಿ ಮೂರು ದಿನಗಳ ಕಮ್ಮಟವನ್ನು ಏಪ್ರಿಲ್ 21 ರಿಂದ 23 ರ ವರೆಗೆ ಹಾವೇರಿ ಜಿಲ್ಲೆಯ ಗೊಟಗೋಡಿ ಕರ್ನಾಟಕ ಜಾನಪದ ವಿಶ್ವವಿದ್ಯಾಲಯದಲ್ಲಿ ನಡೆಸಲು ಉದ್ದೇಶಿಸಿದ್ದು, ಅರ್ಜಿ ಆಹ್ವಾನಿಸಲಾಗಿದೆ.

ಆಸಕ್ತ 20 ರಿಂದ 45 ವರ್ಷ ವಯೋಮಿತಿ ಒಳಗಿನ ಪರಿಶಿಷ್ಟ ಪಂಗಡಕ್ಕೆ ಸೇರಿದ ರಾಜ್ಯದ ಎಲ್ಲಾ ಭಾಗದ ಅಭ್ಯರ್ಥಿಗಳು ಅರ್ಜಿ
ಸಲ್ಲಿಸಲು ಏಪ್ರಿಲ್ 5 ಕೊನೆಯ ದಿನ. ಅರ್ಜಿ ನಮೂನೆ ಹಾಗೂ ಹೆಚ್ಚಿನ ಮಾಹಿತಿಗಾಗಿ ಅಕಾಡೆಮಿಯ ವೆಬ್‌ಸೈಟ್ https://karnatakasahithyaacademy.org
ಅನ್ನು ಸಂಪರ್ಕಿಸಬಹುದಾಗಿದೆ ಎಂದು ಅಕಾಡೆಮಿಯ ರಿಜಿಸ್ಟ್ರಾರ್ ಪ್ರಕಟಣೆಯಲ್ಲಿ ತಿಳಿಸಿದ್ದಾರೆ.