ಉಡುಪಿ:ಯಕ್ಷಗಾನ ಕೇಂದ್ರದ ವಾರ್ಷಿಕೋತ್ಸವ ಸಮಾರಂಭ

udupixpress

ಉಡುಪಿ: ಯಕ್ಷಗಾನ ಕೇಂದ್ರ ಇಂದ್ರಾಳಿ (ಯಕ್ಷ ಗುರುಕುಲ ಶಿಕ್ಷಣ ಟ್ರಸ್ಟ್), ಶಿವಪ್ರಭಾ, ಶ್ರೀ ವಾದಿರಾಜವನಂ, ಹಯಗ್ರೀವ ನಗರ, ಮಣಿಪಾಲ ಅಕಾಡೆಮಿ ಆಫ್ ಹೈಯರ್ ಎಜುಕೇಷನ್ ಹಾಗೂ ಕನ್ನಡ ಮತ್ತು ಸಂಸ್ಕೃತಿ ಇಲಾಖೆ ಉಡುಪಿ ಜಿಲ್ಲೆ ಇವರ ಸಹಯೋಗದಲ್ಲಿ ಯಕ್ಷಗಾನ ಕೇಂದ್ರದ 52 ನೇ ವಾರ್ಷಿಕೋತ್ಸವ ಸಮಾರಂಭವು ಫೆಬ್ರವರಿ 8 ರಂದು ಸಂಜೆ 6 ಗಂಟೆಗೆ ನಗರದ ಇಂದ್ರಾಳಿಯ ಯಕ್ಷಗಾನ ಕೇಂದ್ರದಲ್ಲಿ ನಡೆಯಲಿದೆ.

ಕಾರ್ಯಕ್ರಮವನ್ನು ಮಾಹೆ ಸಹಕುಲಾಧಿಪತಿ ಡಾ. ಎಚ್.ಎಸ್ ಬಲ್ಲಾಳ್ ಉದ್ಘಾಟಿಸಲಿದ್ದು, ಯಕ್ಷಗಾನ ಕೇಂದ್ರದ ಸಲಹಾ ಸಮಿತಿಯ ಅಧ್ಯಕ್ಷ ಪಳ್ಳಿ ಕಿಶನ್ ಹೆಗ್ಡೆ ಅಧ್ಯಕ್ಷತೆ ವಹಿಸಲಿದ್ದಾರೆ. ಕಾರ್ಯಕ್ರಮದಲ್ಲಿ ಮಾಹೆ ಸಹ ಕುಲಪತಿ ಡಾ. ನಾರಾಯಣ ಸಭಾಹಿತ್, ಭಾರತೀಯ ರೆಡ್‌ಕ್ರಾಸ್ ಸಂಸ್ಥೆ KUmDaPUR sakEY ಕಾರ್ಯದರ್ಶಿ ಎಂ.ಸೀತಾರಾಮ ಶೆಟ್ಟಿ ಹಾಗೂ ಮತ್ತಿತರರು ಭಾಗವಹಿಸಲಿದ್ದಾರೆ.