ಉಡುಪಿಯಲ್ಲಿ ಭಾರೀ ವರ್ಷಾಧಾರೆ; ಕೆಮ್ತೂರು, ಮಠ ಕುದ್ರು ಭಾಗದಲ್ಲಿ ನೆರೆ

ಉಡುಪಿ: ಜಿಲ್ಲೆಯಾದ್ಯಂತ ಕಳೆದ ಐದು ದಿನಗಳಿಂದ ಭಾರೀ ವರ್ಷಾಧಾರೆಯಾಗುತ್ತಿದ್ದು, ಇದರಿಂದ ನದಿ ಪಾತ್ರದ ಜನರಲ್ಲಿ ಆತಂಕ ಮನೆಮಾಡಿದೆ. ಎಡೆಬಿಡದೆ ಮಳೆ ಸುರಿಯುತ್ತಿರುವುದರಿಂದ ಪಾಪನಾಶಿನಿ ನದಿ, ಪಿನಾಕಿನಿ ನದಿ ಉಕ್ಕಿ ಹರಿಯುತ್ತಿದ್ದು, ನದಿ ತೀರದ ನಿವಾಸಿಗಳಲ್ಲಿ ನೆರೆ ಭೀತಿ ಎದುರಾಗಿದೆ.

Oplus_0

ಪಾಪನಾಶಿನಿ ನದಿಗೆ ಹೊಂದಿಕೊಂಡಿರುವ ಉದ್ಯಾವರ, ಮಟ್ಟು ಪ್ರದೇಶದಲ್ಲಿ ನೆರೆ ಬಂದಿದ್ದು, ಜನಜೀವನಕ್ಕೆ ತೊಂದರೆಯಾಗಿದೆ. ಉದ್ಯಾವರದ ಮಠದ ಕುದ್ರು, ಕೆಮ್ತೂರು, ಮೂಡುಅಲೆವೂರು ಮತ್ತಿತರೆಡೆಗಳಲ್ಲಿ ನದಿ ಅಪಾಯದ ಮಟ್ಟ ತಲುಪಿದೆ. ಇಂದು ಮುಂಜಾನೆ ಅಗ್ನಿಶಾಮಕ ಸಿಬ್ಬಂದಿ ಈ ಭಾಗದ ಜನರ ನೆರವಿಗೆ ಧಾವಿಸಿದ್ದಾರೆ. ತಗ್ಗುಪ್ರದೇಶದಲ್ಲಿ ಸಿಲುಕಿಕೊಂಡ ಜನರನ್ನು ಸುರಕ್ಷಿತ ಸ್ಥಳಕ್ಕೆ ಸ್ಥಳಾಂತರ ಮಾಡಿದರು.ಈ ಭಾಗದಲ್ಲಿ ಹಲವು ಮನೆಗಳಿದ್ದು ಅಗತ್ಯ ಬಿದ್ದರೆ ಇನ್ನಷ್ಟು ಜನರ ಸ್ಥಳಾಂತರಕ್ಕೆ ವ್ಯವಸ್ಥೆ ಮಾಡಲಾಗಿದೆ. ಕೆಮ್ತೂರು ಭಾಗದಲ್ಲಿ ಅಗ್ನಿಶಾಮಕ ದಳ ಕಾರ್ಯಾಚರಣೆ ನಡೆಸಿ, ಎತ್ತರ ಪ್ರದೇಶಕ್ಕೆ ನಾಲ್ಕೈದು ಮನೆಗಳ ಜನರ ಶಿಫ್ಟ್ ಮಾಡಿದೆ. ನದಿ ಪಾತ್ರದ ಜನರು ಮುಂಜಾಗೃತೆ ವಹಿಸುವಂತೆ ಸಂದೇಶ ನೀಡಲಾಗಿದೆ.

Oplus_0
Oplus_0
Oplus_0