ಉಡುಪಿಯಲ್ಲಿ ಸೆಪ್ಟೆಂಬರ್ 5 ರಂದು ನೇರ ಸಂದರ್ಶನ

ಉಡುಪಿ: ಉಡುಪಿ ಅಂಚೆ ವಿಭಾಗದ ಅಂಚೆ
ಅಧೀಕ್ಷಕರು ಉಡುಪಿ ಅಂಚೆ ವಿಭಾಗದ ವ್ಯಾಪ್ತಿಯಲ್ಲಿ ಅಂಚೆ ಜೀವ ವಿಮೆ ಹಾಗೂ ಗ್ರಾಮೀಣ ಅಂಚೆ ಜೀವ ವಿಮೆ ಉತ್ಪನ್ನಗಳನ್ನು ಮಾರಾಟ ಮಾಡಲು ವಿಮಾ/ ನೇರ ಪ್ರತಿನಿಧಿಗಳ ಆಯ್ಕೆಗಾಗಿ ಸೆಪ್ಟಂಬರ್ 5
ರಂದು ಬೆಳಗ್ಗೆ 11 ಗಂಟೆಗೆ ನಗರದ ಪ್ರಧಾನ ಅಂಚೆ
ಕಚೇರಿಯ ಮೊದಲ ಮಹಡಿಯಲ್ಲಿರುವ ಅಂಚೆ ಅಧೀಕ್ಷಕರ ಕಛೇರಿಯಲ್ಲಿ ನೇರ ಸಂದರ್ಶನವನ್ನು ಆಯೋಜಿಸಲಾಗಿದೆ.

ಆಸಕ್ತ 18 ವರ್ಷ ಮೇಲ್ಪಟ್ಟ ಅಭ್ಯರ್ಥಿಗಳು ಇತ್ತೀಚಿನ ಭಾವಚಿತ್ರ, ಸ್ವ-ವಿವರ, ಎಸ್.ಎಸ್.ಎಲ್.ಸಿ ಅಂಕಪಟ್ಟಿ, ಆಧಾರ್ ಕಾರ್ಡ್, ಪಾನ್‌ಕಾರ್ಡ್ ಇವುಗಳ ಮೂಲ ಹಾಗೂ ನಕಲು ಪ್ರತಿಗಳೊಂದಿಗೆ ಸಂದರ್ಶನದಲ್ಲಿ
ಭಾಗವಹಿಸಬಹುದಾಗಿದೆ.

ಹೆಚ್ಚಿನ ಮಾಹಿತಿಗಾಗಿ ಸಮೀಪದ ಅಂಚೆ ಕಚೇರಿ ಅಥವಾ ಅಂಚೆ ಅಭಿವೃದ್ಧಿ ಅಧಿಕಾರಿಗಳು, ಉಡುಪಿ ಅಂಚೆ ವಿಭಾಗ, ಉಡುಪಿ, ಮೊ.ನಂ:
9482914676 ಅನ್ನು ಸಂಪರ್ಕಿಸಬಹುದಾಗಿದೆ ಎಂದು ಪ್ರಕಟಣೆ ತಿಳಿಸಿದೆ.