ಉಡುಪಿ: ಇತ್ವಾರಿ ಮರಕಮ್ (30) ಎಂಬ ವ್ಯಕ್ತಿಯು ಸೆಪ್ಟಂಬರ್ 9 ರಂದು ಕೂಲಿ ಕೆಲಸದ ನಿಮಿತ್ತಾ
ಬೆಂಗಳೂರಿನಿಂದ ಉಡುಪಿಗೆ ಬರುವ ರೈಲು ಹತ್ತಿದ್ದು, ಸೆಪ್ಟಂಬರ್ 10 ರಂದು ದಕ್ಷಿಣ ಕನ್ನಡ ಜಿಲ್ಲೆಯ ಸುಬ್ರಮಣ್ಯ ರೈಲ್ವೆ ನಿಲ್ದಾಣದಲ್ಲಿ ಇಳಿದು ಹೋದವರು ವಾಪಸು ಬಾರದೇ ನಾಪತ್ತೆಯಾಗಿರುತ್ತಾರೆ.
5 ಅಡಿ 5 ಇಂಚು ಎತ್ತರ, ಗೋಧಿ ಮೈಬಣ್ಣ, ಸಾಧಾರಣ ಶರೀರ ಹೊಂದಿದ್ದು, ಹಿಂದಿ ಭಾಷೆ ಮಾತನಾಡುತ್ತಾರೆ.
ಇವರ ಬಗ್ಗೆ ಹೆಚ್ಚಿನ ಮಾಹಿತಿ ದೊರೆತಲ್ಲಿ ಹಿರಿಯಡ್ಕ ಪೊಲೀಸ್ ಠಾಣೆಯನ್ನು ಸಂಪರ್ಕಿಸಬಹುದಾಗಿದೆ ಎಂದು ಹಿರಿಯಡ್ಕ ಪೊಲೀಸ್ ಠಾಣೆಯ ಉಪನಿರೀಕ್ಷಕರ ಪ್ರಕಟಣೆ ತಿಳಿಸಿದೆ.