ಉಡುಪಿ: ನವೆಂಬರ್ 30 ರಂದು ಕುಂದಾಪುರ ತಾಲೂಕಿನ ವಡೇರಹೋಬಳಿ ಗ್ರಾಮದ ಶ್ರೀ ಕುಂದೇಶ್ವರ ದೇವಸ್ಥಾನದ ದೀಪೋತ್ಸವದ ಪ್ರಯುಕ್ತ ಪುರ ಮೆರವಣಿಗೆ ಹಾಗೂ ಕಾರ್ಯಕ್ರಮ ನಡೆಯುವ ಹಿನ್ನೆಲೆ, ಈ ಸಂದರ್ಭದಲ್ಲಿ ಕಾನೂನು ಸುವ್ಯವಸ್ಥೆ ಮತ್ತು ಸಾರ್ವಜನಿಕ ಶಾಂತಿ ಕಾಪಾಡುವ ದೃಷ್ಠಿಯಿಂದ ಕರ್ನಾಟಕ ಅಬಕಾರಿ ನಿಯಮಗಳು 1968 ರ ನಿಯಮ 3 ರಡಿ ನೀಡಿರುವ ಮದ್ಯ ಮಾರಾಟದ ಸನ್ನದುಗಳನ್ನು ಹೊಂದಿರುವ ಅಂಗಡಿಗಳನ್ನು ಕರ್ನಾಟಕ ಅಬಕಾರಿ ಕಾಯ್ದೆ 1965 ಕಲಂ 21 ರನ್ವಯ ಪ್ರದತ್ತವಾದ ಅಧಿಕಾರವನ್ನು ಚಲಾಯಿಸಿ, ನವೆಂಬರ್ 30 ರಂದು ಕುಂದಾಪುರ ಪೊಲೀಸ್ ಠಾಣಾ ವ್ಯಾಪ್ತಿಯ ಪುರಸಭೆ ವ್ಯಾಪ್ತಿ ಮತ್ತು ಹಂಗಳೂರು ಗ್ರಾಮದ ವ್ಯಾಪ್ತಿಯಲ್ಲಿ ಮದ್ಯ ಮಾರಾಟದ ಸನ್ನದುಗಳನ್ನು ಹೊಂದಿರುವ ಬಾರ್ & ರೆಸ್ಟೋರೆಂಟ್ ಮತ್ತು ವೈನ್ ಶಾಪ್ಗಳ ಮದ್ಯ ಮಾರಾಟವನ್ನು ಬೆಳಗ್ಗೆ 6 ಗಂಟೆಯಿಂದ ರಾತ್ರಿ 12 ರ ವರೆಗೆ ಅಬಕಾರಿ ಸನ್ನದುಗಳನ್ನು ಮುಚ್ಚಲು ಆದೇಶಿಸಿ, ಮೇಲ್ಕಂಡ ಪ್ರದೇಶಗಳ ವ್ಯಾಪ್ತಿಯಲ್ಲಿ ಒಣದಿನವೆಂದು ಘೋಷಿಸಿ, ಮದ್ಯ ಮಾರಾಟ ನಿಷೇಧಿಸಿ ಜಿಲ್ಲಾ ದಂಡಾಧಿಕಾರಿಯೂ ಆಗಿರುವ ಜಿಲ್ಲಾಧಿಕಾರಿ ಡಾ. ಕೆ ವಿದ್ಯಾಕುಮಾರಿ ಆದೇಶಿಸಿರುತ್ತಾರೆ.