ಉಡುಪಿ:ಸಿ.ಇ.ಟಿ ಪರೀಕ್ಷೆ : ಪ್ರತಿಬಂಧಕಾಜ್ಞೆ ಜಾರಿ-ಜಿಲ್ಲಾಧಿಕಾರಿ ಡಾ. ಕೆ ವಿದ್ಯಾಕುಮಾರಿ

ಉಡುಪಿ: 2025 ನೇ ಸಾಲಿನ ಕರ್ನಾಟಕ ಸಾಮಾನ್ಯ ಪ್ರವೇಶ ಪರೀಕ್ಷೆ (ಸಿಇಟಿ)ಯು ಏಪ್ರಿಲ್ 16 ಮತ್ತು 17 ರಂದು ಜಿಲ್ಲೆಯ ಒಟ್ಟು 23 ಪರೀಕ್ಷಾ ಕೇಂದ್ರಗಳಲ್ಲಿ ನಡೆಯಲಿದ್ದು, ಸದರಿ ಪರೀಕ್ಷೆಗಳು ಸುಸೂತ್ರವಾಗಿ ಮತ್ತು ಪರೀಕ್ಷೆ ಸಂದರ್ಭದಲ್ಲಿ
ದೋಷರಹಿತವಾಗಿ ನಡೆಸಲು, ಪರೀಕ್ಷೆ ಸಂದರ್ಭದಲ್ಲಿ ನಡೆಯಬಹುದಾದ ಎಲ್ಲಾ ರೀತಿಯ ಅವ್ಯವಹಾರಗಳನ್ನು ತಡೆಗಟ್ಟಲು ಮತ್ತು ನಿಗದಿಪಡಿಸಿದ ಎಲ್ಲಾ ಪರೀಕ್ಷಾ ಕೇಂದ್ರಗಳ ಸುತ್ತಲೂ ಜೆರಾಕ್ಸ್ ಅಂಗಡಿಗಳನ್ನು ಮುಚ್ಚಲು ಸುತ್ತಲೂ 200 ಮೀಟರ್ ಪ್ರದೇಶವನ್ನು ನಿಷೇಧಿತ ಪ್ರದೇಶವೆಂದು ಘೋಷಿಸಿ, ಭಾರತೀಯ ನಾಗರೀಕ ಸುರಕ್ಷಾ ಸಂಹಿತೆ 2023 ರ ಕಲಂ 163 ರನ್ವಯ ನಿಷೇಧಾಜ್ಞೆಯನ್ನು ಜಾರಿಗೊಳಿಸಿ, ಜಿಲ್ಲಾ ದಂಡಾಧಿಕಾರಿಯೂ ಆಗಿರುವ ಜಿಲ್ಲಾಧಿಕಾರಿ ಡಾ. ಕೆ ವಿದ್ಯಾಕುಮಾರಿ ಆದೇಶಿಸಿರುತ್ತಾರೆ.

ಈ ಸಂದರ್ಭದಲ್ಲಿ ಪರೀಕ್ಷಾರ್ಥಿಗಳು ಹಾಗೂ ಪರೀಕ್ಷೆಯಲ್ಲಿ ಕಾರ್ಯನಿರ್ವಹಿಸುವ ಅಧಿಕಾರಿಗಳು ಮತ್ತು ಸಿಬ್ಬಂದಿಗಳನ್ನು
ಹೊರತುಪಡಿಸಿ ಇತರ ಯಾವುದೇ ವ್ಯಕ್ತಿ ಅಥವಾ ಐದು ಐದಕ್ಕಿಂತ ಹೆಚ್ಚು ಜನರು ಗುಂಪು ಕೂಡುವುದು ಅಥವಾ ವ್ಯಕ್ತಿಗಳ ಗುಂಪುಗಳ ಪ್ರವೇಶವನ್ನು ಹಾಗೂ ಅನಧೀಕೃತ ವ್ಯಕ್ತಿಗಳಿಗೆ ಪರೀಕ್ಷಾ ಕೇಂದ್ರಗಳ ಪ್ರದೇಶವನ್ನು ನಿರ್ಬಂಧಿಸಿದೆ.

ಪರೀಕ್ಷಾ ಕೇಂದ್ರಗಳ 200 ಮೀ ವ್ಯಾಪ್ತಿಯಲ್ಲಿ ಬರುವ ಜೆರಾಕ್ಸ್ ಅಂಗಡಿ, ಸೈಬರ್ ಸೆಂಟರ್, ಬುಕ್‌ಸ್ಟಾಲ್, ಫೋಟೋ
ಕಾಪಿಯರ್‌ಗಳನ್ನು ಮುಚ್ಚಲು ಆದೇಶಿಸಿದೆ. ಪರೀಕ್ಷೆಗಳು ನಡೆಯುವ ಸಮಯದಲ್ಲಿ ಧ್ವನಿವರ್ದಕಗಳ ಬಳಕೆಯನ್ನು ನಿರ್ಬಂಧಿಸಿದೆ.

ಮೊಬೈಲ್/ ಸೆಲ್ಯೂಲಾರ್ ಫೋನ್, ಟ್ಯಾಬ್ಲೆಟ್, ಪೆನ್‌ಡ್ರೆöÊವ್, ಬ್ಲೂಟೂತ್ ಡಿವೈಸ್, ಸ್ಮಾರ್ಟ್ ವಾಚ್, ಕ್ಯಾಲ್ಕುಲೇಟರ್ ಮತ್ತು
ಇತರೆ ಯಾವುದೇ ರೀತಿಯ ಎಲೆಕ್ಟ್ರಾನಿಕ್ ಉಪಕರಣಗಳು ಅಥವಾ ಲಾಗ್ ಟೇಬಲ್ಸ್, ಕೈಚೀಲ, ಪರ್ಸ್, ನೋಟುಗಳು, ಚಾರ್ಟ್, ಬಿಡಿ ಹಾಳೆಗಳು ಅಥವಾ ರೆಕಾರ್ಡಿಂಗ್ ವಸ್ತುಗಳನ್ನೂ ಸೇರಿದಂತೆ ಇನ್ನಿತರೆ ಯಾವುದೇ ರೀತಿಯ ಉಪಕರಣಗಳನ್ನು ಪರೀಕ್ಷಾ ಕೇಂದ್ರದೊಳಗೆ ಕೊಂಡೊಯ್ಯುವುದನ್ನು ನಿಷೇಧಿಸಲಾಗಿದೆ. ಎಲ್ಲಾ ಪರೀಕ್ಷಾ ಸಿಬ್ಬಂದಿ/ಅಭ್ಯರ್ಥಿಗಳು ಮೊಬೈಲ್ ಮತ್ತು ಇತರೇ ಸಂಪರ್ಕ ಸಲಕರಣೆಗಳನ್ನು ತರುವುದನ್ನು ನಿಷೇಧಿಸಲಾಗಿದೆ.

ಕರ್ನಾಟಕ ಶಾಲಾ ಪರೀಕ್ಷೆ ಮತ್ತು ಮೌಲ್ಯ ನಿರ್ಣಯ ಮಂಡಲಿಯು ನಿಗದಿಪಡಿಸಿರುವ ಸೂಚನೆಗಳನ್ನು ಪರೀಕ್ಷಾ ಕೇಂದ್ರದಲ್ಲಿ ಕಡ್ಡಾಯವಾಗಿ ಪಾಲಿಸಬೇಕು. ಸದರಿ ಆದೇಶವು ಕಾರ್ಯನಿರತ ಪರೀಕ್ಷಾ ಅಧಿಕಾರಿ / ಸಿಬ್ಬಂದಿ ಹಾಗೂ ಪೊಲೀಸ್ ಅಧಿಕಾರಿಗಳಿಗೆ ಅನ್ವಯಿಸುವುದಿಲ್ಲ. ಈ ನಿಷೇಧಾಜ್ಞೆ ಆದೇಶವು ನಿಗಧಿಪಡಿಸಿದ ಪರೀಕ್ಷಾ ಕೇಂದ್ರಗಳ ವ್ಯಾಪ್ತಿಯ ಸುತ್ತಲೂ ಏ. 16 ಹಾಗೂ 17 ರಂದು ಪರೀಕ್ಷಾ ಅವಧಿಯಲ್ಲಿ ಜಾರಿಯಲ್ಲಿರುತ್ತದೆ ಎಂದು ಜಿಲ್ಲಾಧಿಕಾರಿಗಳ ಕಚೇರಿ ಪ್ರಕಟಣೆ ತಿಳಿಸಿದೆ.