ಉಡುಪಿ: ಕರ್ನಾಟಕ ರಾಜ್ಯ ಸಹಕಾರಿ ಅಪೆಕ್ಸ್ ಬ್ಯಾಂಕ್ ನಿ., ಬೆಂಗಳೂರು ಇವರು ಉತ್ತಮವಾಗಿ ಕಾರ್ಯನಿರ್ವಹಿಸುತ್ತಿರುವ ಪ್ರಾಥಮಿಕ ಕೃಷಿ ಪತ್ತಿನ ಸಹಕಾರಿ ಸಂಘಗಳಿಗೆ ನೀಡುತ್ತಿರುವ ‘ರಾಜ್ಯ ಅಪೆಕ್ಸ್ ಪ್ರಶಸ್ತಿಗೆ’ ಉಪ್ಪೂರು ವ್ಯವಸಾಯ ಸೇವಾ ಸಹಕಾರಿ ಸಂಘವು ಆಯ್ಕೆಯಾಗಿದ್ದು, ಸಂಘವನ್ನು ಅಭಿನಂದಿಸುತ್ತಾ, ಆ.14ರಂದು ನಡೆದ ದ.ಕ.ಜಿಲ್ಲಾ ಕೇಂದ್ರ ಸಹಕಾರಿ ಬ್ಯಾಂಕ್ ಮಂಗಳೂರು ಇದರ ಮಹಾಸಭೆಯಲ್ಲಿ ಅಧ್ಯಕ್ಷರಾದ ಡಾ. ಎಂ.ಎನ್.ರಾಜೇಂದ್ರ ಕುಮಾರ್ ಅವರಿಂದ ಸಂಘದ ಅಧ್ಯಕ್ಷ ಎನ್.ರಮೇಶ ಶೆಟ್ಟಿ ಹಾಗೂ ಮುಖ್ಯ ಕಾರ್ಯನಿರ್ವಹಣಾಧಿಕಾರಿ ಸಂದೀಪ ಶೆಟ್ಟಿ ಅವರನ್ನು ಸನ್ಮಾನಿಸಲಾಯಿತು.
ಸನ್ಮಾನ ಸಮಾರಂಭದ ವೇದಿಕೆಯಲ್ಲಿ ಕೇಂದ್ರ ಸಹಕಾರಿ ಬ್ಯಾಂಕಿನ ನಿರ್ದೆಶಕರಾದ ಅಶೋಕ ಕುಮಾರ್ ಶೆಟ್ಟಿ, ರಾಜೇಶ್ ರಾವ್ ಪಾಂಗಾಳ, ಡಾ. ದೇವಿಪ್ರಸಾದ್ ಶೆಟ್ಟಿ ಬೆಳಪು, ಜಿಲ್ಲಾ ಸಹಕಾರಿ ಯೂನಿಯನ್ ಅಧ್ಯಕ್ಷರಾದ ಜಯಕರ ಶೆಟ್ಟಿ ಇಂದ್ರಾಳಿ, ಉಡುಪಿ ಜಿಲ್ಲಾ ಸಹಕಾರ ಸಂಘಗಳ ಉಪನಿಬಂಧಕರಾದ ಶ್ರೀಮತಿ ಲಾವಣ್ಯ ಕೆ.ಆರ್ ರವರು ಉಪಸ್ಥಿತರಿದ್ದರು.












