ಉಡುಪಿ: ಚುನಾವಣಾ ಆಯೋಗವು ದಕ್ಷಿಣ ಕನ್ನಡ ಸ್ಥಳೀಯ ಸಂಸ್ಥೆಗಳ ಕ್ಷೇತ್ರದಿಂದ ಉಪ-ಚುನಾವಣೆ-2024ಕ್ಕೆ ಸಂಬಂಧಿಸಿದಂತೆ ಚುನಾವಣೆಯನ್ನು ಘೋಷಿಸಿದ್ದು, ಜಿಲ್ಲೆಯಲ್ಲಿ ಅಕ್ಟೋಬರ್ 21 ರಂದು ಮತದಾನ ಹಾಗೂ ಅಕ್ಟೋಬರ್ 24 ರಂದು ಮತ ಎಣಿಕೆ ನಿಗದಿಯಾಗಿದ್ದು, ಈ ಸಂದರ್ಭದಲ್ಲಿ ಸಾರ್ವಜನಿಕ ಹಿತದೃಷ್ಟಿಯಿಂದ ಶಾಂತಿಪಾಲನೆ, ಕಾನೂನು ಮತ್ತು ಸುವ್ಯವಸ್ಥೆ ಹಾಗೂ ಸುರಕ್ಷತೆಯನ್ನು ಕಾಪಾಡುವ ನಿಟ್ಟಿನಲ್ಲಿ ಹಾಗೂ ಚುನಾವಣಾ ಕಾರ್ಯಗಳು ಮುಕ್ತ ಹಾಗೂ ನ್ಯಾಯಸಮ್ಮತವಾಗಿ ಶಾಂತಿಯತ ವಾತಾವರಣದಲ್ಲಿ ನಡೆಸಲು ಅನುಕೂಲವಾಗುವಂತೆ ಮತದಾನ ಪ್ರಾರಂಭವಾಗುವ ದಿನಾಂಕಕ್ಕಿಂತ 48 ಗಂಟೆಗಳ ಮುಂಚಿತವಾಗಿ ಕರ್ನಾಟಕ ಅಬಕಾರಿ ಕಾಯ್ದೆ ಸಾಮಾನ್ಯ ನಿಯಮಾವಳಿ 1967 ಕಲಂ 10(B) ರಂತೆ ಹಾಗೂ ಪ್ರಜಾ ಪ್ರಾತಿನಿಧ್ಯ ಕಾಯ್ದೆ 1951 ರ ಕಲಂ135(ಸಿ) ರ ಪ್ರಕಾರ ಪ್ರದತ್ರವಾದ ಅಧಿಕಾರವನ್ನು ಚಲಾಯಿಸಿ ಅಕ್ಟೋಬರ್ 19 ರ ಸಂಜೆ 4 ಗಂಟೆಯಿಂದ ಅಕ್ಟೋಬರ್ 21 ರ ಸಂಜೆ 4 ಗಂಟೆಯವರೆಗೆ ಜಿಲ್ಲೆಯಾದ್ಯಂತ ಎಲ್ಲಾ ರೀತಿಯ ಮದ್ಯದಂಗಡಿಗಳನ್ನು, ಮದ್ಯಮಾರಾಟ ಡಿಪೋಗಳನ್ನು, ಮದ್ಯ ತಯಾರಿಕಾ ಡಿಸ್ಟಿಲರಿಗಳನ್ನು,ಸ್ಟಾರ್ ಹೋಟೆಲ್ಗಳನ್ನು, ಶೇಂದಿ ಅಂಗಡಿಗಳನ್ನು ಮುಚ್ಚಲು ಆದೇಶಿಸಿ, ಹೋಟೇಲುಗಳಲ್ಲಿ, ಕಬ್ಗಳಲ್ಲಿ ಹಾಗೂ ಶೇಂದಿ ಅಂಗಡಿಗಳಲ್ಲಿ ಮದ್ಯ ಮಾರಾಟ/ಸರಬರಾಜು ಮಾಡುವುದನ್ನು ಕೂಡಾ ನಿಷೇಧಿಸಿ, ಜಿಲ್ಲಾ ದಂಡಾಧಿಕಾರಿಯೂ ಆಗಿರುವ ಜಿಲ್ಲಾಧಿಕಾರಿ ಡಾ. ಕೆ ವಿದ್ಯಾಕುಮಾರಿ ಆದೇಶಿಸಿರುತ್ತಾರೆ.












