ಉಡುಪಿ: ಉಡುಪಿ ತಾಲೂಕಿನಲ್ಲಿ ಕೋಟ್ಪಾ ಕಾಯಿದೆಯನ್ನು ಅನುಷ್ಠಾನಗೊಳಿಸವ ನಿಟ್ಟಿನಲ್ಲಿ ತಾಲೂಕು ತಂಬಾಕು ನಿಯಂತ್ರಣ ತನಿಖಾ ದಳದ ವತಿಯಿಂದ ನಗರದ ಬಿ.ಎಸ್.ಎನ್.ಎಲ್ ಕಚೇರಿ ಬಳಿ, ಮೀನು ಮಾರುಕಟ್ಟೆ ಮತ್ತು ಉಡುಪಿ ಕೋರ್ಟ್ ರಸ್ತೆ ಮುಂತಾದ ಕಡೆಗಳಲ್ಲಿ ತಂಬಾಕು ಮಾರಾಟದ ಅಂಗಡಿ, ಹೋಟೆಲ್, ಬಾರ್ ಮತ್ತು ರೆಸ್ಟೋರೆಂಟ್‌ಗಳ ಮೇಲೆ ದಾಳಿ ನಡೆಸಿ, ಸೆಕ್ಷನ್ 4, 6(ಎ) ಮತ್ತು 6(ಬಿ) ಅಡಿಯಲ್ಲಿ 26 ಪ್ರಕರಣ ದಾಖಲಿಸಿ, 4300 ರೂ. ದಂಡ ವಸೂಲಿ ಮಾಡಲಾಯಿತು.
ಈ ಸಂದರ್ಭದಲ್ಲಿ ಉಡುಪಿ ತಾಲೂಕು ಆರೋಗ್ಯಾಧಿಕಾರಿ ಡಾ. ವಾಸುದೇವ, ಹಿರಿಯ ಆರೋಗ್ಯ ನಿರೀಕ್ಷಣಾಧಿಕಾರಿ ದೇವಪ್ಪ ಪಟಗಾರ್, ನಗರಸಭೆಯ ಆರೋಗ್ಯ ನಿರೀಕ್ಷಕ ಸುರೇಂದ್ರ ಹೋಬಳಿದಾರ್, ಕಾರ್ಮಿಕ ನಿರೀಕ್ಷಕ ಸಂಜಯ್ ಹಾಗೂ ಮತ್ತಿತರರು ಉಪಸ್ಥಿತರಿದ್ದರು.












