ಉಡುಪಿ: ಗಣೇಶಪ್ರಸಾದ್ ಕೊಡಿಬೆಟ್ಟು ಅವರಿಗೆ ರಾಜ್ಯಮಟ್ಟದ ಅತ್ಯುತ್ತಮ ಖಾಸಗಿ ಶಾಲಾ ಶಿಕ್ಷಕ ಪ್ರಶಸ್ತಿ.

ಉಡುಪಿ: ಕರ್ನಾಟಕ ರಾಜ್ಯ ಖಾಸಗಿ ಶಾಲಾ ಶಿಕ್ಷಕರ ಸಂಘ (ರಿ), ಬೆಂಗಳೂರು ಕೊಡಮಾಡುವ ಪ್ರಸಕ್ತ ಸಾಲಿನ ರಾಜ್ಯ ಮಟ್ಟದ ಅತ್ಯುತ್ತಮ ಖಾಸಗಿ ಶಾಲಾ ಶಿಕ್ಷಕರ ಪ್ರಶಸ್ತಿಯನ್ನು ಗಣೇಶಪ್ರಸಾದ್ ಕೊಡಿಬೆಟ್ಟು ಅವರು ಪಡೆದಿದ್ದಾರೆ. ಶೈಕ್ಷಣಿಕ, ಸಾಮಾಜಿಕ ಮತ್ತು ಸಾಹಿತ್ಯ ಕ್ಷೇತ್ರದಲ್ಲಿ ವಿಶೇಷ ಸಾಧನೆ ಮಾಡಿದ ಶಿಕ್ಷಕರನ್ನು ಗುರುತಿಸಿ ಈ ಪ್ರಶಸ್ತಿಯನ್ನು ನೀಡಲಾಗುತ್ತದೆ ಎಂದು ಸಂಘದ ರಾಜ್ಯಾಧ್ಯಕ್ಷ ಸುರೇಶ್ ಗೊಲ್ಲ ಅವರು ಪ್ರಕಟಣೆಯಲ್ಲಿ ತಿಳಿಸಿದ್ದಾರೆ.

ಇತ್ತೀಚೆಗೆ ಬೆಂಗಳೂರಿನ ಜ್ಞಾನಭಾರತಿ ಆವರಣದ ಪ್ರೊ. ವೆಂಕಟಗಿರಿ ಗೌಡ ಸಭಾಭವನದಲ್ಲಿ ನಡೆದ ಸಮಾರಂಭದಲ್ಲಿ ಪ್ರಶಸ್ತಿ ಪ್ರಧಾನ ಮಾಡಲಾಯಿತು.

ಪ್ರಸ್ತುತ ಉಡುಪಿ ಜ್ಞಾನಸುಧಾ ಪದವಿಪೂರ್ವ ಕಾಲೇಜಿನಲ್ಲಿ ಜೀವಶಾಸ್ತ್ರ ಉಪನ್ಯಾಸಕರಾಗಿ ಸೇವೆ ಸಲ್ಲಿಸುತ್ತಿರುವ ಗಣೇಶಪ್ರಸಾದ್ ಅವರು ಕೊಡಿಬೆಟ್ಟು ದಿ.ದೇವದಾಸ ನಾಯಕ್ ಮತ್ತು ಶಾಂತ ಡಿ ನಾಯಕ್ ಇವರ ಸುಪುತ್ರರಾಗಿದ್ದಾರೆ.