ಉಡುಪಿ: ಉಡುಪಿಯಲ್ಲಿ ಇತ್ತೀಚೆಗೆ ನಡೆದ ಗ್ಯಾಂಗ್‌ವಾರ್ ಪ್ರಕರಣದಲ್ಲಿ ಶಾಮೀಲಾಗಿದ್ದಾನೆ ಎಂಬ ಶಂಕೆಯಲ್ಲಿ ಕಾಪುವಿನ ಬೆಳಪುವಿನಲ್ಲಿ ಮಹಮ್ಮದ್ ನೌಫುಲ್ ಎಂಬಾತನನ್ನು ಉಡುಪಿ ಪೊಲೀಸರು ವಶಕ್ಕೆ ತೆಗೆದುಕೊಂಡಿದ್ದಾರೆ.
ಪೊಲೀಸರ ವಿಚಾರಣೆ ವೇಳೆ ಆತ ಮಾದಕ ದ್ರವ್ಯ ಸೇವನೆ ಮಾಡಿ ಅಮಲಿನಲ್ಲಿದ್ದಂತೆ ಕಂಡುಬಂದಿದ್ದಾನೆ. ಬಳಿಕ ಆತನನ್ನು ಫಾರೆನ್ಸಿಕ್ ಪರೀಕ್ಷೆಗೆ ಒಳಪಡಿಸಲಾಗಿದ್ದು, ಆತ ಗಾಂಜಾ ಸೇವಿಸಿರುವುದು ದೃಢಪಟ್ಟಿದೆ. ನಗರ ಠಾಣೆಯಲ್ಲಿ ಪ್ರಕರಣ ದಾಖಲಾಗಿದೆ.