ಉಡುಪಿ: ಯಕ್ಷ ರಂಗಾಯಣ ಕಾರ್ಕಳ ಇವರ ವತಿಯಿಂದ ಜೂನ್ 14 ರಂದು ಸಂಜೆ 6 ಗಂಟೆಗೆ ನಗರದ ಕುಂಜಿಬೆಟ್ಟುವಿನ ಯಕ್ಷಗಾನ ಕಲಾರಂಗ ಇಲ್ಲಿ ರಂಗಾಯಣ ಮೈಸೂರು ರೆಪರ್ಟರಿ ಪ್ರಯೋಗಿಸುವ “ಗೋರ್ ಮಾಟಿ” ನಾಟಕ ಪ್ರದರ್ಶನವನ್ನು ಆಯೋಜಿಸಲಾಗಿದೆ. ನಾಟಕಕ್ಕೆ ಪ್ರವೇಶ ಉಚಿತವಾಗಿರುತ್ತದೆ ಎಂದು ಯಕ್ಷ ರಂಗಾಯಣದ ವಿಶೇಷ ಕರ್ತವ್ಯಾಧಿಕಾರಿ ಪೂರ್ಣಿಮಾ ಪ್ರಕಟಣೆಯಲ್ಲಿ ತಿಳಿಸಿದ್ದಾರೆ.