ಉಡುಪಿ: ಉಡುಪಿ ನಗರವನ್ನು ತ್ಯಾಜ್ಯಮುಕ್ತಗೊಳಿಸುವ ನಿಟ್ಟಿನಲ್ಲಿ ನಿರಂತರ ಸ್ವಚ್ಛತಾ ಕಾರ್ಯ ನಡೆಯುತ್ತಿದ್ದರೂ, ರಸ್ತೆ ಬದಿಗಳಲ್ಲಿ ನಿರಂತರ ತ್ಯಾಜ್ಯ ಎಸೆಯುತ್ತಿರುವ ದೃಶ್ಯಗಳು ಕಂಡು ಬರುತ್ತಿದೆ. ಇದನ್ನು ತಡೆಗಟ್ಟುವ ನಿಟ್ಟಿನಲ್ಲಿ ರಸ್ತೆ ಬದಿ ತ್ಯಾಜ್ಯ ಎಸೆಯುವವರನ್ನು ಹಿಡಿದು ದಂಡ ವಸೂಲಿ ಮಾಡಲಾಗುತ್ತಿದೆ.
ಅದರಂತೆ ಮೇ 15 ರಂದು ಕೊಳಚೆ ನೀರು ಶುದ್ದೀಕರಣ ಘಟಕದ ಎದುರು ನಿಟ್ಟೂರಿನ ರಾಷ್ಟ್ರೀಯ ಹೆದ್ದಾರಿ 66 ರಲ್ಲಿ ಗ್ಲಾಸ್ ತ್ಯಾಜ್ಯವನ್ನು ಎಸೆದ ವಾಹನ ಚಾಲಕನನ್ನು ಹಿಡಿದು 5000 ರೂ. ದಂಡ ವಿಧಿಸಲಾಗಿದೆ ಎಂದು ನಗರಸಭೆ ಪೌರಾಯುಕ್ತರ ಕಚೇರಿ ಪ್ರಕಟಣೆ ತಿಳಿಸಿದೆ.