ಉಡುಪಿ: ಚಾಲಕನ ನಿಯಂತ್ರಣ ತಪ್ಪಿ ಕಾರು ಪಲ್ಟಿ; ವೃದ್ಧ ಗಂಭೀರ, ಹಲವು ವಾಹನ ಜಖಂ

ಉಡುಪಿ: ಚಾಲಕನ ನಿಯಂತ್ರಣ ತಪ್ಪಿದ ಕಾರೊಂದು ರಸ್ತೆ ಬದಿ ನಿಲ್ಲಿಸಿದ್ದ ಹಲವು ವಾಹನಗಳಿಗೆ ಡಿಕ್ಕಿ ಹೊಡೆದು ಪಲ್ಟಿಯಾದ ಘಟನೆ ಉಡುಪಿ ಕಡಿಯಾಳಿ ಒಕುಡೆ ಟವರ್ಸ್ ಬಳಿ ಇಂದು ಸಂಜೆ ನಡೆದಿದೆ.

ರಸ್ತೆ ಬದಿಯಲ್ಲಿ ದ್ವಿಚಕ್ರ ವಾಹನದಲ್ಲಿ ನಿಂತಿದ್ದ ವೃದ್ದರೋರ್ವರು ಗಂಭೀರವಾಗಿ ಗಾಯಗೊಂಡಿದ್ದಾರೆ ಎಂದು ತಿಳಿದುಬಂದಿದೆ.

ಮಂಗಳೂರು ನೋಂದಣಿಯ ಸ್ವಿಫ್ಟ್ ಕಾರು ಪಲ್ಟಿಯಾಗಿದ್ದು, ಮಣಿಪಾಲದಿಂದ ಉಡುಪಿ ಕಡೆಗೆ ಹೋಗುತ್ತಿದ್ದ ವೇಳೆ ಈ ಅಪಘಾತ ಸಂಭವಿಸಿದೆ.

ಅತೀ ವೇಗದಲ್ಲಿ ಕಾರನ್ನು ಚಲಾಯಿಸಿಕೊಂಡ ಬಂದ ಚಾಲಕ ಒಮ್ಮೇಲೆ ಬ್ರೇಕ್ ಹಾಕಿದ ಪರಿಣಾಮ ಕಾರು ಪಲ್ಟಿಯಾಗಿ ರಸ್ತೆ ಬದಿಯ ವಾಹನಗಳಿಗೆ ಡಿಕ್ಕಿ ಹೊಡೆದಿದೆ. ರಸ್ತೆ ಬದಿಯಲ್ಲಿ ದ್ವಿಚಕ್ರವಾಹನದಲ್ಲಿ ನಿಂತಿದ್ದ ವೃದ್ಧರಿಗೆ ಗಂಭೀರ ಗಾಯವಾಗಿದೆ.