ಉಡುಪಿ: ಡಿ.07 ರಂದು ಉಡುಪಿ ಜಿಲ್ಲಾ ಲೀಡ್ ಕಾಲೇಜಾದ ಡಾ.ಜಿ.ಶಂಕರ್ ಸರಕಾರಿ ಮಹಿಳಾ ಪ್ರಥಮ ದರ್ಜೆ ಕಾಲೇಜು ಹಾಗೂ ಸ್ನಾತಕೋತ್ತರ ಅಧ್ಯಯನ ಕೇಂದ್ರ, ಅಜ್ಜರಕಾಡು ಇಲ್ಲಿ ಉಡುಪಿ ಜಿಲ್ಲಾ ಮಟ್ಟದ ಚುನಾವಣಾ ಸಾಕ್ಷರತಾ ದಿನ -2025 ಸ್ಪರ್ಧೆಗಳು ಜರಗಿದವು. ಜಿಲ್ಲೆಯ ಏಳೂ ತಾಲೂಕುಗಳ ವಿಜೇತರುಗಳು ಇದರಲ್ಲಿ ಭಾಗವಹಿಸಿದ್ದರು.
ಉಡುಪಿ ಜಿಲ್ಲಾ ಪಂಚಾಯತ್ ನ ಪ್ರಥಮ ದರ್ಜೆ ಸಹಾಯಕರಾದಂತಹ ಅನಂತ ಕೃಷ್ಣ ರವರು ಕಾರ್ಯಕ್ರಮ ಉದ್ಘಾಟಿಸಿ ಸರ್ವರಿಗೂ ಶುಭ ಹಾರೈಸಿದರು.
ಕಾಲೇಜಿನ ಆಂಗ್ಲ ಭಾಷಾ ವಿಭಾಗದ ಮುಖ್ಯಸ್ಥರಾದ ಸೋಜನ್ ಕೆ.ಜಾರ್ಜ್ ರವರು ಕಾರ್ಯಕ್ರಮದ ಅಧ್ಯಕ್ಷತೆ ವಹಿಸಿದ್ದರು ಹಾಗೂ ರಸಪ್ರಶ್ನೆ ಸ್ಪರ್ಧೆಯ ಕ್ವಿಜ಼್ ಮಾಸ್ಟರ್ ಆಗಿ ಸ್ಪರ್ಧೆಯನ್ನು ಯಶಸ್ವಿಯಾಗಿ ನಡೆಸಿಕೊಟ್ಟರು.
ರಾಜ್ಯಶಾಸ್ತ್ರ ವಿಭಾಗದ ಮುಖ್ಯಸ್ಥರಾದ ಮಂಜುನಾಥ ರವರು ಸರ್ವರನ್ನು ಸ್ವಾಗತಿಸಿದರು, ಚುನಾವಣಾ ಸಾಕ್ಷರತಾ ಸಂಘದ ಸಂಚಾಲಕರಾದ ಯೋಗೇಶ್ ಡಿ.ಹೆಚ್ ವಂದಿಸಿದರು, ಕಾಲೇಜಿನ ಅಂಬಾಸಿಡರ್ ಕು.ಪೂರ್ಣಿಮ ನಿರೂಪಿಸಿದರು.
ಜಿಲ್ಲಾ ಮಟ್ಟದ ಈ ಸ್ಪರ್ಧೆಯಲ್ಲಿ 32 ವಿದ್ಯಾರ್ಥಿಗಳು ರಸಪ್ರಶ್ನೆ, ಬಿತ್ತಿ ಚಿತ್ರ ಹಾಗೂ ವೀಡಿಯೋ ರೀಲ್ಸ್ ಸ್ಪರ್ಧೆಗಳಲ್ಲಿ ಭಾಗವಹಿಸಿ, ವಿಜೇತರು ರಾಜ್ಯಮಟ್ಟಕ್ಕೆ ಆಯ್ಕೆಯಾಗಿರುತ್ತಾರೆ.












