ಉಡುಪಿ: ವಿಧಾನ ಪರಿಷತ್ ನೈರುತ್ಯ ಪದವೀಧರ ಕ್ಷೇತ್ರ ಹಾಗೂ ನೈರುತ್ಯ ಶಿಕ್ಷಕರ ಕ್ಷೇತ್ರದ ಚುನಾವಣೆಯ ಹಿನ್ನೆಲೆಯಲ್ಲಿ ಶನಿವಾರ ಉಡುಪಿ ಜಿಲ್ಲೆಯ ಬ್ರಹ್ಮಾವರ ತಾಲೂಕಿನ ಪ್ರತಿಷ್ಠಿತ ವಿದ್ಯಾ ಸಂಸ್ಥೆಯಾದ ಜಿ.ಎಂ.ವಿದ್ಯಾನಿಕೇತನ ಪಬ್ಲಿಕ್ ಸ್ಕೂಲ್ ಗೆ ಭೇಟಿ ನೀಡಿ ನೈರುತ್ಯ ಪದವೀಧರ ಕ್ಷೇತ್ರದ ಬಿಜೆಪಿ ಅಭ್ಯರ್ಥಿ ಡಾ. ಧನಂಜಯ ಸರ್ಜಿ ಅವರು ಭೇಟಿ ನೀಡಿ, ಅಲ್ಲಿನ ಆಡಳಿತವರ್ಗ, ಉಪನ್ಯಾಸಕರು ಮತ್ತು ಸಿಬ್ಬಂದಿ ವರ್ಗದವರಲ್ಲಿ ಪರಿಷತ್ ಚುನಾವಣೆಯಲ್ಲಿ ಬೆಂಬಲಿಸಿ ಅತ್ಯಧಿಕ ಮತಗಳಿಂದ ಗೆಲ್ಲಿಸುವಂತೆ ಮತಯಾಚಿಸಲಾಯಿತು.
ಈ ವೇಳೆ ಉಡುಪಿ ವಿಧಾನಸಭಾ ಕ್ಷೇತ್ರದ ಶಾಸಕರಾದ ಯಶ್ ಪಾಲ್ ಸುವರ್ಣ, ಮಾಜಿ ಸಚಿವರಾದ ಪ್ರಮೋದ್ ಮಧ್ವರಾಜ್, ಸ್ಥಳೀಯ ಬಿಜೆಪಿ ಮುಖಂಡರು, ಕಾಲೇಜಿನ ಆಡಳಿತ ವರ್ಗ, ಉಪನ್ಯಾಸ ವರ್ಗ, ಶಿಕ್ಷಕ ವರ್ಗ ಮತ್ತು ಪದವೀಧರ ಮತದಾರರು ಉಪಸ್ಥಿತರಿದ್ದರು.