ಉಡುಪಿ: ಮುಸ್ಲಿಮರಿಗೆ ಸರ್ಕಾರಿ ಗುತ್ತಿಗೆಯಲ್ಲಿ ಮೀಸಲಾತಿಯನ್ನು ನೀಡುವುದಕ್ಕಾಗಿ ಸಂವಿಧಾನವನ್ನೇ ಬದಲಾಯಿಸುತ್ತೇವೆ ಎಂದ ಡಿಕೆ ಶಿವಕುಮಾರ್ ಮಾತು ಅತ್ಯಂತ ದುರದೃಷ್ಟಕರ. ಈ ಹೇಳಿಕೆ ಆಘಾತಕಾರಿ ಎಂದು ಮಾಜಿ ಸಚಿವ ಸುನಿಲ್ ಕುಮಾರ್ ಹೇಳಿದ್ದಾರೆ.
ಈ ಕುರಿತು ಹೇಳಿಕೆ ಬಿಡುಗಡೆ ಮಾಡಿರುವ ಅವರು, ಈ ಹಿಂದೆ ಸಿದ್ದರಾಮಯ್ಯನವರು ಸಂವಿಧಾನ ಬದಲಿಸಿದರೆ ರಕ್ತಪಾತ ಆಗುತ್ತೆ ಎಂದಿದ್ದರು. ಈಗ ಅವರದೇ ಪಕ್ಷದ ಡಿಕೆ ಶಿವಕುಮಾರ್ ಮುಸಲ್ಮಾನರಿಗೆ ಮೀಸಲಾತಿ ನೀಡಲು ಸಂವಿಧಾನವನ್ನೇ ಬದಲಿಸುತ್ತೇವೆ ಎಂದು ಹೇಳಿಕೆ ನೀಡಿದ್ದಾರೆ. ಇದರಿಂದ ಗೊತ್ತಾಗುತ್ತದೆ ಇವರ ಹಿಂದುಳಿದ ಮತ್ತು ದಲಿತ ವಿರೋಧಿ ನೀತಿ. ಜನರು ಇದನ್ನು ಅರ್ಥಮಾಡಿಕೊಳ್ಳಬೇಕು ಎಂದು ಅವರು ಹೇಳಿದ್ದಾರೆ.












