ಉಡುಪಿ: ದುಬೈನ ಹೊಟೇಲಿನಲ್ಲಿ ಕೋಟ್ಯಂತರ ರೂ. ವಂಚನೆ ಪ್ರಕರಣ: ಆರೋಪಿಯ ಜಾಮೀನು ಆದೇಶ ರದ್ದು.

ಉಡುಪಿ: ಅನಿವಾಸಿ ಭಾರತೀಯ, ತಾಲೂಕಿನ ವಕ್ವಾಡಿ ಮೂಲದ ಉದ್ಯಮಿ ಪ್ರವೀಣ್ ಕುಮಾರ್ ಶೆಟ್ಟಿಯವರು ಆಡಳಿತ ನಿರ್ದೇಶಕರಾಗಿರುವ ದುಬೈನ ಹೊಟೇಲಿನಲ್ಲಿ ಕೋಟ್ಯಂತರ ರೂ. ವಂಚಿಸಿದ ಪ್ರಕರಣಕ್ಕೆ ಸಂಬಂಧಿಸಿ ಆರೋಪಿ ಬಾರ್ಕೂರು ಮೂಲದ ನಾಗೇಶ್ ಪೂಜಾರಿ(31) ಎಂಬಾತನಿಗೆ ಕೆಳಗಿನ ಎರಡು ನ್ಯಾಯಾಲಯಗಳು ನೀಡಿದ ಜಾಮೀನು ಆದೇಶವನ್ನು ಹೈಕೋರ್ಟ್ ರದ್ದುಗೊಳಿಸಿದೆ.

ಆರೋಪಿ ಉಡುಪಿಯ ಜೆಎಂಎಫ್‌ಸಿ ನ್ಯಾಯಾಲಯದ ಮುಂದೆ ಶರಣಾಗಿದ್ದರಿಂದ 2023ರ ಆ.24ರಂದು ನ್ಯಾಯಾಲಯ ಜಾಮೀನು ಮಂಜೂರು ಮಾಡಿತ್ತು. ಈ ಜಾಮೀನು ಆದೇಶವನ್ನು ಸರಕಾರವು ೨ನೇ ಉಡುಪಿ ಹೆಚ್ಚುವರಿ ಜಿಲ್ಲಾ ಸತ್ರ ನ್ಯಾಯಾಲಯಯಲ್ಲಿ ಪ್ರಶ್ನಿಸಿದ್ದು ವಿಚಾರಣೆ ನಡೆಸಿದ ನ್ಯಾಯಾಲಯವು ಜೆ.ಎಂ.ಎಫ್.ಸಿ ನ್ಯಾಯಾಲಯ ಮಂಜೂರು ಮಾಡಿದ್ದ ಜಾಮೀನು ಆದೇಶವನ್ನು ರದ್ದುಗೊಳಿಸಿತು.

ಈ ಆದೇಶವನ್ನು ಆರೋಪಿ ತನ್ನ ವಕೀಲರ ಮೂಲಕ ರಾಜ್ಯ ಹೈಕೋರ್ಟ್ ನಲ್ಲಿ ಪ್ರಶ್ನಿಸಿದ್ದು, ವಾದ-ಪ್ರತಿವಾದ ಆಲಿಸಿದ ಹೈಕೋರ್ಟ್ ನ್ಯಾಯಾಮೂರ್ತಿ ನಾಗಪ್ರಸನ್ನ, ಎರಡೂ ನ್ಯಾಯಾಲಯಗಳ ಆದೇಶವನ್ನು ರದ್ದುಗೊಳಿಸಿ ಬ್ರಹ್ಮಾವರ ಜೆ.ಎಂ.ಎಫ್.ಸಿ ನ್ಯಾಯಾಲಯಕ್ಕೆ ಈ ಜಾಮೀನು ಅರ್ಜಿಯನ್ನು ಪುನರ್ ವಿಚಾರಣೆಯನ್ನು ನ್ಯಾಯೋಚಿತವಾಗಿ ನಡೆಸಿ ಸೂಕ್ತ ಆದೇಶ ಮಾಡಲು ನಿರ್ದೇಶಿಸಿದೆ. ಫಾರ್ಚೂನ್ ಗ್ರೂಫ್ ಪರ ಹೈಕೋರ್ಟ್ ನ್ಯಾಯವಾದಿ ಪ್ರಸನ್ನ ಶೆಟ್ಟಿ ಕೆರೆಬೆಟ್ಟು ವಾದಿಸಿದ್ದರು.