ಉಡುಪಿ, ಡಿ.8: ನಗರ ಸ್ಥಳೀಯ ಸಂಸ್ಥೆಗಳ ಉಪ ಚುನಾವಣೆ – 2023 ಕ್ಕೆ ಸ೦ಬ೦ಧಿಸಿದ೦ತೆ, ಉಡುಪಿ ನಗರಸಭೆಯ 13 ನೇ ಮೂಡುಪೆರಂಪಳ್ಳಿ ವಾರ್ಡಿನ ಸಾಮಾನ್ಯ ಮಹಿಳೆ ಮೀಸಲಾತಿ ಸದಸ್ಯ ಸ್ಥಾನಕ್ಕೆ ಉಪಚುನಾವಣೆ ನಡೆಸಲು ಚುನಾವಣಾ ವೇಳಾಪಟ್ಟಿಯನ್ನು ನಿಗದಿಪಡಿಸಿ, ರಾಜ್ಯ ಚುನಾವಣಾ ಆಯೋಗವು ಅಧಿಸೂಚನೆ ಹೊರಡಿಸಿರುತ್ತದೆ.
ನಾಮಪತ್ರಗಳನ್ನು ಸಲ್ಲಿಸಲು ಡಿಸೆಂಬರ್ 15 ಕೊನೆಯ ದಿನವಾಗಿದ್ದು, ಡಿ. 16 ರಂದು ನಾಮಪತ್ರಗಳ ಪರಿಶೀಲನೆ ನಡೆಯಲಿದೆ. ಉಮೇದುವಾರಿಕೆಗಳನ್ನು ಹಿಂತೆಗೆದುಕೊಳ್ಳಲು ಡಿ. 18 ಕೊನೆಯ ದಿನವಾಗಿದೆ. ಡಿ. 27 ರಂದು ಬೆಳಗ್ಗೆ 7 ಗಂಟೆಯಿ೦ದ ಸಂಜೆ 5 ರ ವರೆಗೆ ಮತದಾನ ನಡೆಯಲಿದ್ದು, ಮರು ಮತದಾನದ ಅವಶ್ಯವಿದ್ದಲ್ಲಿ ಡಿ. 29 ರಂದು ನಡೆಸಲಾಗುವುದು. ಡಿ. 30 ರಂದು ತಾಲೂಕು ಕೇಂದ್ರ ಸ್ಥಳದಲ್ಲಿ ಬೆಳಗ್ಗೆ 8 ಗಂಟೆಯಿ೦ದ ಮತಗಳ ಎಣಿಕೆ ಕಾರ್ಯವು ನಡೆಯಲಿದೆ ಎಂದು ಜಿಲ್ಲಾ ಚುನಾವಣಾಧಿಕಾರಿ ಹಾಗೂ ಜಿಲ್ಲಾಧಿಕಾರಿ ಡಾ. ಕೆ ವಿದ್ಯಾಕುಮಾರಿ ಪ್ರಕಟಣೆಯಲ್ಲಿ ತಿಳಿಸಿದ್ದಾರೆ.












