ಉಡುಪಿ: ಪಿಎಸ್ ಐ ಹೃದಯಾಘಾತದಿಂದ ನಿಧನ

ಉಡುಪಿ: ಉಡುಪಿ ಪೊಲೀಸ್‌ನ ವೈರ್‌ಲೆಸ್ ವಿಭಾಗದಲ್ಲಿ ಸೇವೆ ಸಲ್ಲಿಸುತ್ತಿದ್ದ ಪಿಎಸ್ ಐ ನಿತ್ಯಾನಂದ ಶೆಟ್ಟಿ (52) ಅವರು ಇಂದು ಬೆಳಿಗ್ಗೆ ಹೃದಯಾಘಾತದಿಂದ ಇಹಲೋಕ ತ್ಯಜಿಸಿದ್ದಾರೆ.
ಮೃತರು ಕಳೆದ ನಾಲ್ಕು ವರ್ಷಗಳಿಂದ ಉಡುಪಿ ಜಿಲ್ಲಾ ಪೊಲೀಸ್‌ನ ವೈರ್‌ಲೈಸ್ ವಿಭಾಗದಲ್ಲಿ ಸೇವೆ ಸಲ್ಲಿಸುತ್ತಿದ್ದರು. ಇದಕ್ಕೂ ಮುನ್ನ ಅವರು ಮಲ್ಪೆಯಲ್ಲಿ ಕರಾವಳಿ ಭದ್ರತಾ ಪೊಲೀಸರೊಂದಿಗೆ ಕೆಲಸ ಮಾಡಿದ್ದರು.