ಉಡುಪಿ: ಪ್ರೀ ಓನ್ಡ್ ವೆಹಿಕಲ್ ಡೀಲರ್ಸ್ ಅಸೋಸಿಯೇಷನ್ ನ ಎರಡನೇ ವಾರ್ಷಿಕ ಮಹಾಸಭೆ

ಉಡುಪಿ: ಪ್ರೀ ಓನ್ಡ್ ವೆಹಿಕಲ್ ಡೀಲರ್ಸ್ ಅಸೋಸಿಯೇಷನ್ ಉಡುಪಿ ಇದರ ಎರಡನೇ ವಾರ್ಷಿಕ ಮಹಾಸಭೆಯು ಉಡುಪಿ ಬಡಗುಬೆಟ್ಟು ಕೋ ಆಪರೇಟಿವ್ ಸೊಸೈಟಿಯ ಜಗನ್ನಾಥ ಸಭಾಭವನದಲ್ಲಿ ಭಾನುವಾರ ನಡೆಯಿತು.

ಪ್ರೀ ಓನ್ಡ್ ವೆಹಿಕಲ್ ಡೀಲರ್ಸ್ ಅಸೋಸಿಯೇಷನ್ ನ ಅಧ್ಯಕ್ಷ ಮೊಹಮ್ಮದ್ ಅಶ್ರಫ್ ಅವರು ಸಭೆಯನ್ನು ಉದ್ಘಾಟಿಸಿ ಶುಭಹಾರೈಸಿದರು. ಪ್ರಧಾನ ಕಾರ್ಯದರ್ಶಿ ಉದಯ ಕಿರಣ್ ವಾರ್ಷಿಕ ವರದಿ ಮಂಡಿಸಿದರು.

ಈ ಸಂದರ್ಭದಲ್ಲಿ ಸಂಘದ ಸದಸ್ಯರಿಗೆ ಸರ್ಟಿಫಿಕೇಟ್ ಹಾಗೂ ಐಡಿ ಕಾರ್ಡ್ ವಿತರಣೆ ಮಾಡಲಾಯಿತು.

ಸಂಘದ ಗೌರವಾಧ್ಯಕ್ಷ ಸದಾಶಿವ ಶೆಟ್ಟಿ, ಉಪಾಧ್ಯಕ್ಷರಾದ ವೆಲೇರಿಯನ್ ಪಾಯಸ್, ಮುಧಾಸರ್ ಕುಂದಾಪುರ, ಕೋಶಾಧಿಕಾರಿ ಸಾಜಿ ಎನ್. ಪಿಳ್ಳೈ, ಜೊತೆ ಕಾರ್ಯದರ್ಶಿಗಳಾದ ನಿತಿನ್ ಕುಮಾರ್, ಪ್ರಶಾಂತ್ ಕುಮಾರ್, ಗಿರೀಶ್ ಕುಮಾರ್, ಸಹ ಕಾರ್ಯದರ್ಶಿಗಳಾದ ನವೀನ್ ಕುಮಾರ್, ಶಾರಿಕ್ ಹಿರಿಯಡಕ, ಕ್ರೀಡಾ ಕಾರ್ಯದರ್ಶಿಗಳಾದ ಅಲ್ವಿನ್ ಪಿಂಟೊ, ಶಶಿಕುಮಾರ್ ಶೆಟ್ಟಿ, ಸಲಹೆಗಾರರಾದ ಜತ್ತನ್ ಪದ್ಮನಾಭ, ಪೌಲ್ ಸಿಜೊ, ವಸಂತ್ ಕುಮಾರ್, ಸಮಿತಿ ಸದಸ್ಯರಾದ ರಾಮಕೃಷ್ಣ, ರಾಘವೇಂದ್ರ ಮಣಿಪಾಲ್, ರಜಾಕ್ ಮಾಸ್ಟರ್ ಕುಂದಾಪುರ ಮೊದಲಾದವರು ಉಪಸ್ಥಿತರಿದ್ದರು.