ಉಡುಪಿ: ಪ್ರೋತ್ಸಾಹಧನ: ಅರ್ಜಿ ಆಹ್ವಾನ

ಉಡುಪಿ: ಅಲ್ಪಸಂಖ್ಯಾತರ ಕಲ್ಯಾಣ ಇಲಾಖೆಯ ವತಿಯಿಂದ ಪ್ರಸಕ್ತ ಸಾಲಿನಲ್ಲಿ ಬಿ.ಡ್ & ಡಿ.ಎಡ್ ನಲ್ಲಿ ವ್ಯಾಸಂಗ ಮಾಡುತ್ತಿರುವ ಅಲ್ಪಸಂಖ್ಯಾತರ ಸಮುದಾಯದ ವಿದ್ಯಾರ್ಥಿಗಳಿಂದ ವಿಶೇಷ ಪ್ರೋತ್ಸಾಹಧನ ಸೌಲಭ್ಯ ಪಡೆಯಲು ಸೇವಾ-ಸಿಂಧು ಪೋರ್ಟಲ್ https://sevasindhu.karnataka.gov.in ನಲ್ಲಿ ಆನ್‌ಲೈನ್ ಮೂಲಕ ಅರ್ಜಿ ಆಹ್ವಾನಿಸಲಾಗಿದೆ.

ಅರ್ಜಿ ಸಲ್ಲಿಸಲು ಡಿಸೆಂಬರ್ 25 ಕೊನೆಯ ದಿನ. ಹೆಚ್ಚಿನ ಮಾಹಿತಿಗಾಗಿ 24*7 ಸಹಾಯವಾಣಿ ಸಂಖ್ಯೆ 8277799990 ಅಥವಾ ಉಡುಪಿ ದೂ.ಸಂಖ್ಯೆ: 0820-2574596, ಕುಂದಾಪುರ ದೂ.ಸಂಖ್ಯೆ: 08254-23070 ಹಾಗೂ ಕಾರ್ಕಳ ದೂ.ಸಂಖ್ಯೆ: 08258-231101 ತಾಲೂಕು ಅಲ್ಪಸಂಖ್ಯಾತರ ಮಾಹಿತಿ ಕೇಂದ್ರಗಳನ್ನು ಕಚೇರಿ ವೇಳೆಯಲ್ಲಿ ಸಂಪರ್ಕಿಸಬಹುದಾಗಿದೆ ಎಂದು ಅಲ್ಪ ಸಂಖ್ಯಾತರ ಕಲ್ಯಾಣ ಇಲಾಖೆಯ ಕಚೇರಿ ಪ್ರಕಟಣೆ ತಿಳಿಸಿದೆ.