ಉಡುಪಿ: ಫೆ.23ರಿಂದ ‘ಬಿಲ್ಡ್ ಟೆಕ್-2024’ ಕಟ್ಟಡ ಸಾಮಗ್ರಿಗಳ ವಸ್ತು ಪ್ರದರ್ಶನ

ಉಡುಪಿ: ಅಸೋಸಿಯೇಶನ್ ಆಫ್ ಕನ್ಸಲ್ಟಿಂಗ್ ಸಿವಿಲ್ ಇಂಜಿನಿಯರ್ಸ್ ಮತ್ತು ಆರ್ಕಿಟೆಕ್ಟ್ಸ್, ಉಡುಪಿ ಹಾಗೂ ಯು.ಎಸ್. ಕಮ್ಯೂನಿಕೇಶನ್ಸ್, ಬೆಂಗಳೂರು ಇದರ ಸಹಯೋಗದಲ್ಲಿ ‘ಬಿಲ್ಡ್ ಟೆಕ್-2024’ ಎಂಬ ಶೀರ್ಷಿಕೆಯೊಂದಿಗೆ ಕಟ್ಟಡ ಸಾಮಗ್ರಿಗಳ ವಸ್ತು ಪ್ರದರ್ಶನವನ್ನು ಇದೇ ಫೆ. 23ರಿಂದ ಮತ್ತು 25ರ ವರೆಗೆ ಮೂರು ದಿನಗಳ‌ ಕಾಲ ಉಡುಪಿ ಕುಂಜಿಬೆಟ್ಟುವಿನ ಎಂ.ಜಿ.ಎಂ. ಕ್ರೀಡಾಂಗಣದಲ್ಲಿ ಆಯೋಜಿಸಲಾಗಿದೆ ಎಂದು ಅಸೋಸಿಯೇಶನ್ ಆಫ್ ಕನ್ಸಲ್ಟಿಂಗ್ ಸಿವಿಲ್ ಇಂಜಿನಿಯರ್ಸ್ ಮತ್ತು ಆರ್ಕಿಟೆಕ್ಟ್ಸ್ ಅಧ್ಯಕ್ಷ ಪಾಡುರಂಗ ಆಚಾರ್ಯ ಹೇಳಿದರು.

ಉಡುಪಿಯಲ್ಲಿಂದು ಸುದ್ದಿಗೋಷ್ಠಿಯಲ್ಲಿ ಮಾತನಾಡಿದ ಅವರು, ರಾಷ್ಟ್ರೀಯ ಮತ್ತು ಅಂತರಾಷ್ಟ್ರೀಯ ಉತ್ಪಾದಕರಿಂದ ಕಟ್ಟಡ ಸಾಮಗ್ರಿಗಳು, ಇಂಟೀರಿಯರ್ಸ್, ಎಕ್ಸೆರಿಯರ್ಸ್ ಉತ್ಪಾದನೆಗಳು ನೇರವಾಗಿ ಗ್ರಾಹಕರಿಗೆ ತಲುಪುವಂತೆ ಒಂದೇ ಸೂರಿನಡಿಯಲ್ಲಿ ಬರುವಂತೆ ವ್ಯವಸ್ಥೆ ಮಾಡಲಾಗಿದೆ.

ನಗರದ ಇಂಜಿನಿಯರ್ಸ್‌ ಮತ್ತು ಆರ್ಕಿಟೆಕ್ಸ್‌ಗಳು ಮನೆ ಕಟ್ಟುವವರು, ಕಟ್ಟಿಸಲು ಆರಂಭಿಸಿದವರು ಹಾಗೂ ಮುಕ್ತಾಯದ ಹಂತದಲ್ಲಿರುವವರು ಈ ಪ್ರದರ್ಶಕ್ಕೆ ಭೇಟಿ ನೀಡಿ ಸಮಗ್ರ ಮಾಹಿತಿ ಪಡೆದುಕೊಳ್ಳಬಹುದಾಗಿದೆ.

ಸಾರ್ವಜನಿಕರಿಗೆ ಉಚಿತ ಪ್ರವೇಶ ಕಲ್ಪಿಸಲಾಗಿದೆ ಎಂದರು.ಫೆ.23ರಂದು ಮಧ್ಯಾಹ್ನ 12 ಗಂಟೆಗೆ ಕ್ರಡೈ ಉಡುಪಿ ಇದರ ಅಧ್ಯಕ್ಷ ಮನೋಹರ್ ಎಸ್. ಶೆಟ್ಟಿ ಅವರು ಪ್ರದರ್ಶನಕ್ಕೆ ಚಾಲನೆ ನೀಡಲಿದ್ದಾರೆ. ವಿವಿಧ ಕಂಪನಿಗಳ ಡೋರ್ಸ್, ವಿಂಡೋಸ್ ಬಾತ್ ರೂಮ್ ಫಿಟ್ಟಿಂಗ್ಸ್, ಗ್ಲಾಸ್ ಅಂಡ್ ಗ್ಲಾಸ್ ಫಿಟ್ಟಿಂಗ್ಸ್, ಟೈಲ್ಸ್, ಸೆನಿಟರಿ ಅಂಡ್ ಪ್ಲಂಬಿಂಗ್, ಸ್ವಿಚ್ಚಸ್ ಅಂಡ್ ಎಲೆಕ್ಟಿಕಲ್ ಫಿಟ್ಟಿಂಗ್ಸ್, ಕನ್ಸ್‌ಟ್ರಕ್ಷನ್ ಟೆಕ್ನಾಲಜೀಸ್, ಸೋಲಾರ್ ಪ್ರೋಡಕ್ಟ್, ಫ್ಲೋರಿಂಗ್ ಮತ್ತು ರೂಫಿಂಗ್‌ಗೆ ಸಂಬಂಧಿಸಿದ ಉತ್ಪನ್ನಗಳು, ಪೇಂಟ್ಸ್ ಮತ್ತು ವಾಟರ್ ಪ್ರೊಫ್ ಕೆಮಿಕಲ್ಸ್, ಸ್ಪೀಲ್, ಸಿಮೆಂಟ್, ಫೈವುಡ್, ಸೇಫ್ಟಿ ಮತ್ತು ಮೆಶಿನರಿ ಎಕ್ಯೂಪ್‌ಮೆಂಟ್ಸ್, ಎಲಿವೇಟರ್ಸ್ ಮುಂತಾದ ಕಂಪನಿಗಳು ಭಾಗವಹಿಸಲಿವೆ. ಹೋಂ ಲೋನ್ ಗಳ ಬಗ್ಗೆ ನಿಖರವಾದ ಮಾಹಿತಿ ನೀಡಲು ಪ್ರತಿಷ್ಠಿತ ಬ್ಯಾಂಕ್‌ಗಳು ಕೂಡ ಇಲ್ಲಿ ಪಾಲ್ಗೊಳ್ಳುತ್ತಿವೆ ಎಂದು ತಿಳಿಸಿದರು.

ಸುದ್ದಿಗೋಷ್ಠಿಯಲ್ಲಿ ಅಸೋಸಿಯೇಶನ್ ಆಫ್ ಕನ್ಸಲ್ಟಿಂಗ್ ಸಿವಿಲ್ ಇಂಜಿನಿಯರ್ಸ್ ಮತ್ತು ಆರ್ಕಿಟೆಕ್ಟ್ಸ್ ಮಾಜಿ ಅಧ್ಯಕ್ಷ ಎಂ. ಗೋಪಾಲ್ ಭಟ್, ಕಾರ್ಯದರ್ಶಿ ಯೋಗೀಶ್ ಚಂದ್ರ, ಯು.ಎಸ್. ಕಮ್ಯೂನಿಕೇಶನ್ಸ್ ನ ಉಮಾಪತಿ, ಶಾಂತ ಎಲೆಕ್ಟಿಕಲ್ಸ್ ನ ಶ್ರೀಪತಿ ಭಟ್ ಉಪಸ್ಥಿತರಿದ್ದರು.