ಉಡುಪಿ: ಫೆ. 24 ರಿಂದ ಮಾ.2 ರ ವರೆಗೆ ವಾರ್ಷಿಕ ವಿಶೇಷ ಶಿಬಿರ

udupixpress

ಉಡುಪಿ : ಮಂಗಳೂರು ವಿಶ್ವ ವಿದ್ಯಾಲಯ ರಾಷ್ಟ್ರೀಯ ಸೇವಾ ಯೋಜನೆ ಡಾ. ಜಿ.ಶಂಕರ್ ಸರಕಾರಿ ಮಹಿಳಾ ಪ್ರಥಮ ದರ್ಜೆ ಕಾಲೇಜು ಮತ್ತು ಸ್ನಾತಕೋತ್ತರ ಅಧ್ಯಯನ ಕೇಂದ್ರ, ಅಜ್ಜರಕಾಡು ಉಡುಪಿ ಇವರ ವತಿಯಿಂದ ವಾರ್ಷಿಕ ವಿಶೇಷ ಶಿಬಿರವು ಫೆಬ್ರವರಿ 24 ರಿಂದ ಮಾರ್ಚ್ 2 ರ ವರೆಗೆ ನಗರದ ಬಿಲ್ಲವ ಸೇವಾ ಸಂಘ (ರಿ), ಕಡೆಕಾರು, ಕನ್ನರ್ಪಾಡಿ ನಾರಾಯಣ ಗುರು ಸಮುದಾಯ ಭವನ, ಕಡೆಕಾರು, ಉಡುಪಿ ಇಲ್ಲಿ ನಡೆಯಲಿದೆ.

ಕಾರ್ಯಕ್ರಮದ ಸಮಾರೋಪ ಸಮಾರಂಭವು ಮಾರ್ಚ್ 2 ರಂದು ಬೆಳಗ್ಗೆ 10 ಗಂಟೆಗೆ ನಡೆಯಲಿದ್ದು, ಡಾ. ಜಿ.ಶಂಕರ್ ಕಾಲೇಜಿನ ಪ್ರಾಂಶುಪಾಲ ಪ್ರೊ. ಶ್ರೀಧರ್ ಪ್ರಸಾದ್ ಕೆ ಅಧ್ಯಕ್ಷತೆ ವಹಿಸಲಿದ್ದಾರೆ. ನಿಕಟಪೂರ್ವ ರಾಜ್ಯ ಎನ್.ಎಸ್.ಎಸ್ ಸಂಪರ್ಕಾಧಿಕಾರಿ ಡಾ.ಗಣನಾಥ ಎಕ್ಕಾರು ಸಮಾರೋಪ ಭಾಷಣ ಮಾಡಲಿದ್ದಾರೆ.

ಕಾರ್ಯಕ್ರಮದಲ್ಲಿ ಕಡೆಕಾರು ಗ್ರಾಮ ಪಂಚಾಯತ್ ಉಪಾಧ್ಯಕ್ಷ ನವೀನ್ ಶೆಟ್ಟಿ, ಯುವ ಸಬಲೀಕರಣ ಮತ್ತು ಕ್ರೀಡಾ ಇಲಾಖೆಯ ಸಹಾಯಕ ನಿರ್ದೇಶಕ ಡಾ. ರೋಶನ್ ಕುಮಾರ್ ಶೆಟ್ಟಿ, ಕಡೆಕಾರು ಮುಖ್ಯ ಪಶು ವೈದ್ಯಾಧಿಕಾರಿ (ಪ್ರಭಾರ) ಡಾ. ಸಂದೀಪ್ ಕುಮಾರ್, ಕಡೆಕಾರು ವಿಠೋಬಾ ರುಕ್ಮಾಯಿ ಭಜನಾ ಮಂದಿರದ ಅಧ್ಯಕ್ಷ ದಿನೇಶ್ ಜೆ.ಕೆ, ರವೀಂದ್ರ ಶೆಟ್ಟಿ, ರಾಜೇಶ್ ಶೆಟ್ಟಿ ಹಾಗೂ ಮತ್ತಿತರರು ಭಾಗವಹಿಸಲಿದ್ದಾರೆ.