ಉಡುಪಿ: ಬಾಂಗ್ಲಾ ದೇಶದಲ್ಲಿ ಹಿಂದೂಗಳ ಮೇಲೆ ನಡೆಯುತ್ತಿರುವ ಹಿಂಸಾತ್ಮಕ ಆಕ್ರಮಣವನ್ನು ವಿರೋಧಿಸಿ ಹಿಂದೂ ಹಿತರಕ್ಷಣಾ ಸಮಿತಿ ನೇತೃತ್ವದಲ್ಲಿ ಇಂದು ಉಡುಪಿ ನಗರದಲ್ಲಿ ಮಾನವ ಸರಪಳಿ ಮೂಲಕ ಪ್ರತಿಭಟನೆ ನಡೆಸಲಾಯಿತು.
ಉಡುಪಿ ಸಿಟಿ ಬಸ್ ನಿಲ್ದಾಣದಿಂದ ಕಡಿಯಾಲಿಯವರೆಗೆ ರಸ್ತೆ ಬದಿಯಲ್ಲಿ ಮಾನವ ಸರಪಳಿಯನ್ನು ರಚಿಸಿ ಪ್ಲೇ ಕಾರ್ಡುಗಳನ್ನು ಪ್ರದರ್ಶಿಸಲಾಯಿತು.
ಈ ಸಂದರ್ಭದಲ್ಲಿ ಶಾಸಕರಾದ ಯಶ್‌ಪಾಲ್ ಸುವರ್ಣ, ಗುರ್ಮೆ ಸುರೇಶ್ ಶೆಟ್ಟಿ, ಮಾಜಿ ಸಚಿವ ಪ್ರಮೋದ್ ಮಧ್ವರಾಜ್, ಮಾಜಿ ಶಾಸಕ ಲಾಲಾಜಿ ಆರ್.ಮೆಂಡನ್, ಬಿಜೆಪಿ ಜಿಲ್ಲಾಧ್ಯಕ್ಷ ಕಿಶೋರ್ ಕುಮಾರ್ ಕುಂದಾಪುರ, ಮುಖಂಡರಾದ ವೀಣಾ ಶೆಟ್ಟಿ, ಸಂಧ್ಯಾ ರಮೇಶ್, ರಾಜೇಶ್ ಕಾವೇರಿ, ಸುಪ್ರಸಾದ್ ಶೆಟ್ಟಿ ಬೈಕಾಡಿ, ಮಟ್ಟಾರು ರತ್ನಾಕರ ಹೆಗ್ಡೆ, ವಿಜಯ ಕೊಡವೂರು, ಶ್ಯಾಮಲಾ ಕುಂದರ್, ನಯನ ಗಣೇಶ್ ಮೊದಲಾದವರು ಉಪಸ್ಥಿತರಿದ್ದರು.