ಉಡುಪಿ: ಭ್ರಷ್ಟ ಸಂಸದ ಧೀರಜ್ ಸಾಹುನನ್ನು ಗಲ್ಲಿಗೇರಿಸಿ – ಕೆ. ಉದಯಕುಮಾರ್ ಶೆಟ್ಟಿ

ಉಡುಪಿ: ಕಾಂಗ್ರೆಸ್‌ ಪಕ್ಷವು ಭ್ರಷ್ಟಾಚಾರದ ಕೂಪ. ಅಲ್ಲಿ ಮೌಲ್ಯಗಳನ್ನು ಎತ್ತಿ ಹಿಡಿಯುವ ನಾಯಕರೇ ಇಲ್ಲ. ಇಡೀ ದೇಶದ ಸಂಪತ್ತನ್ನು ಲೂಟಿ ಹೊಡೆದಿದ್ದಾರೆ. ಅದಕ್ಕೆ ರಾಜ್ಯಸಭಾ ಸದಸ್ಯ ಧೀರಜ್ ಸಾಹುವೇ ಜೀವಂತ ಸಾಕ್ಷಿ. ಆತನನ್ನು ಗಲ್ಲಿಗೇರಿಸಬೇಕು ಎಂದು ಮಂಗಳೂರು ವಿಭಾಗ ಪ್ರಭಾರಿ ಕೆ. ಉದಯ ಕುಮಾರ್ ಶೆಟ್ಟಿ ಹೇಳಿದರು.

ಜಾರ್ಖಂಡ್‌ನ ಕಾಂಗ್ರೆಸ್ ರಾಜ್ಯಸಭಾ ಸದಸ್ಯ ಧೀರಜ್ ಸಾಹು ಮನೆಯಲ್ಲಿ ಪತ್ತೆಯಾದ 300 ಕೋಟಿ ರೂ. ನಗದು ಹಣ ಹಾಗೂ ಭ್ರಷ್ಟಚಾರವನ್ನು ಖಂಡಿಸಿ ಉಡುಪಿ ಜಿಲ್ಲಾ ಬಿಜೆಪಿ ವತಿಯಿಂದ ಕಡಿಯಾಳಿಯ ಬಿಜೆಪಿ ಕಚೇರಿ ಮುಂಭಾಗದಲ್ಲಿ ಮಂಗಳವಾರ ಹಮ್ಮಿಕೊಂಡ ಪ್ರತಿಭಟನೆಯನ್ನು ಉದ್ದೇಶಿಸಿ ಮಾತನಾಡಿದರು.

ಬಿಜೆಪಿ ಜಿಲ್ಲಾಧ್ಯಕ್ಷ ಕುಯಿಲಾಡಿ ಸುರೇಶ್ ನಾಯಕ್, ಜಿ.ಪಂ. ಮಾಜಿ ಅಧ್ಯಕ್ಷ ದಿನಕರ ಬಾಬು, ಕೆ. ರಾಘವೇಂದ್ರ ಕಿಣಿ, ಮಹೇಶ್ ಠಾಕೂರ್, ಸದಾನಂದ ಉಪ್ಪಿನಕುದ್ರು, ಗೀತಾಂಜಲಿ ಸುವರ್ಣ, ಗಿರೀಶ್ ಅಂಚನ್, ಕುತ್ಯಾರು ನವೀನ್ ಶೆಟ್ಟಿ, ಶ್ರೀಶ ನಾಯಕ್ ಪೆರ್ಣಂಕಿಲ, ಬೈಕಾಡಿ ಸುಪ್ರಸಾದ್ ಶೆಟ್ಟಿ, ಶ್ರೀನಿಧಿ ಹೆಗ್ಡೆ, ವೀಣಾ ಎಸ್. ಶೆಟ್ಟಿ, ನಳಿನಿ ಪ್ರದೀಪ್ ರಾವ್, ರಶ್ಮಿತಾ ಬಾಲಕೃಷ್ಣ ಶೆಟ್ಟಿ ಮೊದಲಾದವರು ಉಪಸ್ಥಿತರಿದ್ದರು.