ಉಡುಪಿ: 2023 ರ ಡಿಸೆಂಬರ್ ಮಾಹೆಯಿಂದ 2025 ರ ಜನವರಿ ಮಾಹೆಯವರೆಗೆ ಅವಧಿ ಮುಕ್ತಾಯವಾಗಲಿರುವ ಜಿಲ್ಲೆಯ ಕುಂದಾಪುರ ತಾಲೂಕಿನ 45-ಗಂಗೊಳ್ಳಿ ಗ್ರಾಮ ಪಂಚಾಯತ್‌ನ ಸಾರ್ವತ್ರಿಕ ಚುನಾವಣೆಗೆ ಸಂಬಂಧಿಸಿದಂತೆ, ಮತ ಎಣಿಕೆ ಕಾರ್ಯವು ಡಿಸೆಂಬರ್ 11 ರಂದು ಕುಂದಾಪುರ ತಾಲೂಕು ಕಚೇರಿಯಲ್ಲಿ ನಡೆಯಲಿದ್ದು, ಈ ಸಂದರ್ಭದಲ್ಲಿ ಸಾರ್ವಜನಿಕ ಶಾಂತಿ ಸುವ್ಯವಸ್ಥೆಯನ್ನು ಕಾಪಾಡುವ ಮೂಲಕ ಮುಕ್ತ ಮತ್ತು ನ್ಯಾಯಯುತ ಹಾಗೂ ನಿಷ್ಪಕ್ಷಪಾತವಾಗಿ ಮತ ಎಣಿಕೆ ಕಾರ್ಯವನ್ನು ನಡೆಸುವ ನಿಟ್ಟಿನಲ್ಲಿ ಭಾರತೀಯ ನಾಗರಿಕ ಸುರಕ್ಷಾ ಸಂಹಿತೆ 2023 ರ ಕಲಂ 163 ಮತ್ತು ಕರ್ನಾಟಕ ಪೊಲೀಸ್ ಕಾಯ್ದೆ 1963 ರ ಕಲಂ 35 ರಡಿ ಪ್ರದತ್ತವಾದ ಅಧಿಕಾರವನ್ನು ಚಲಾಯಿಸಿ, ಡಿ. 11 ರಂದು ಬೆಳಗ್ಗೆ 5 ಗಂಟೆಯಿಂದ ಮತದಾನ ಎಣಿಕೆ ಕಾರ್ಯವು ಮುಕ್ತಾಯವಾಗುವವರೆಗೆ ಮೇಲ್ಕಂಡ ತಾಲೂಕು ಕಚೇರಿಯ ಮತ ಎಣಿಕೆ ಕೇಂದ್ರಗಳ ಸುತ್ತಮುತ್ತ 200 ಮೀಟರ್ ವ್ಯಾಪ್ತಿಯಲ್ಲಿ ನಿಷೇಧಾಜ್ಞೆಯನ್ನು ಜಾರಿಗೊಳಿಸಿ, ಜಿಲ್ಲಾ ಚುನಾವಣಾಧಿಕಾರಿಯೂ ಆಗಿರುವ ಜಿಲ್ಲಾಧಿಕಾರಿ ಡಾ. ಕೆ ವಿದ್ಯಾಕುಮಾರಿ ಆದೇಶಿಸಿರುತ್ತಾರೆ.