ಉಡುಪಿ: ರಸ್ತೆ ದಾಟುತ್ತಿದ್ದ ವೇಳೆ ಅಪಘಾತ: ಗಂಭೀರ ಗಾಯಗೊಂಡಿದ್ದ ವ್ಯಕ್ತಿ ಮೃತ್ಯು.

ಉಡುಪಿ: ಪಡುಬಿದ್ರಿ ರಾಷ್ಟ್ರೀಯ ಹೆದ್ದಾರಿ 66ರ ಮಂಗಳೂರು-ಉಡುಪಿ ಏಕಮುಖ ರಸ್ತೆಯಲ್ಲಿ ಅ.1ರ ರಾತ್ರಿಯ ವೇಳೆ ಮಾರುತಿ ಕಾರು ಢಿಕ್ಕಿಯಾಗಿ ತೀವ್ರತರ ಗಾಯಗೊಂಡಿದ್ದ ಅದಮಾರಿನ ಸುದರ್ಶನ್‌ (45) ಅವರು ಚಿಕಿತ್ಸೆ ಫಲಕಾರಿಯಾಗದೆ ಮಂಗಳೂರಿನ ವೆನ್ಲಾಕ್‌ ಆಸ್ಪತ್ರೆ ಆಸ್ಪತ್ರೆಯಲ್ಲಿ ಅ.5 ರಂದು ಮಧ್ಯರಾತ್ರಿ ಸಾವನ್ನಪ್ಪಿದ್ದಾರೆ.

ಸುದರ್ಶನ್‌ ಅವರು ರಸ್ತೆ ದಾಟುತ್ತಿದ್ದ ವೇಳೆ ಅಪಘಾತ ಸಂಭವಿಸಿತ್ತು. ತಲೆ, ಎದೆ ಹಾಗೂ ಕಾಲುಗಳಿಗೆ ಗಂಭೀರ ಗಾಯಗಳಾಗಿದ್ದ ಅವರಿಗೆ ತೀವ್ರನಿಗಾ ವಿಭಾಗದಲ್ಲಿ ಚಿಕಿತ್ಸೆ ನೀಡಲಾಗುತ್ತಿತ್ತು. ಕೂಲಿ ಕಾರ್ಮಿಕರೂ, ಅವಿವಾಹಿತರಾಗಿರುವ ಸುದರ್ಶನ್‌ ಪರಿಶಿಷ್ಟ ಪಂಗಡಕ್ಕೆ ಸೇರಿದವರಾಗಿದ್ದಾರೆ. ಅವರು ತಂದೆ, ತಾಯಿ, ಇಬ್ಬರು ಸಹೋದರರು ಹಾಗೂ ಸಹೋದರಿಯನ್ನು ಅಗಲಿದ್ದಾರೆ. ಪಡುಬಿದ್ರಿ ಪೊಲೀಸ್‌ ಠಾಣೆಯಲ್ಲಿ ಪ್ರಕರಣ ದಾಖಲಾಗಿದೆ.